₹500 ಕೋಟಿ ಬಾಕಿ | ಪೌರ ಕಾರ್ಮಿಕರ ಭವಿಷ್ಯದೊಂದಿಗೆ ಬಿಬಿಎಂಪಿ ಚೆಲ್ಲಾಟ: ಮುಖ್ಯಮಂತ್ರಿ ಚಂದ್ರು

Date:

Advertisements
  • ಪೌರ ಕಾರ್ಮಿಕರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಬಿಬಿಎಂಪಿ ಹಾಗೂ ಕಸ ವಿಲೇವಾರಿ ಗುತ್ತಿಗೆದಾರರು
  • ಗುತ್ತಿಗೆ ಏಜೆನ್ಸಿಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 16,000 ಪೌರ ಕಾರ್ಮಿಕರು

ರಾಜಧಾನಿ ಬೆಂಗಳೂರಿನ ಸ್ವಚ್ಛತೆ ಕಾಪಾಡುತ್ತಿರುವ ಪೌರ ಕಾರ್ಮಿಕರ ಮೂಲ ಸಮಸ್ಯೆಗಳನ್ನು ಬಗೆಹರಿಸಿ. ಪೌರ ಕಾರ್ಮಿಕರ ವೇತನದಲ್ಲಿ ₹500 ಕೋಟಿಗೂ ಹೆಚ್ಚಿನ ಮೊತ್ತದ ಇಎಸ್‌ಐ ಹಾಗೂ ಪಿಎಫ್‌ ಹಣವನ್ನು 5 ವರ್ಷಗಳಿಂದ ಬಿಬಿಎಂಪಿ ಬಾಕಿ ಉಳಿಸಿಕೊಂಡಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.

ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಗುರುವಾರ ದಾಖಲೆಗಳ ಸಮೇತ ಪೌರ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ಬಹಿರಂಗ ಪಡಿಸಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಐದು ವರ್ಷಗಳಲ್ಲಿ ₹500 ಕೋಟಿಗೂ ಹೆಚ್ಚಿನ ಮೊತ್ತದ ಇಎಸ್‌ಐ ಮತ್ತು ಪಿಎಫ್ ಹಣವನ್ನು ಬಾಕಿ ಉಳಿಸಿಕೊಂಡಿದ್ದು, ಇವರುಗಳ ಭವಿಷ್ಯ ಹಾಗೂ ಆರೋಗ್ಯದೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಕಸ ವಿಲೇವಾರಿ ಗುತ್ತಿಗೆದಾರರು ಚೆಲ್ಲಾಟವಾಡುತ್ತಿದ್ದಾರೆ. ಇವರುಗಳ ಬದುಕಿನಲ್ಲಿ ಸಂಚಕಾರ ತರುತ್ತಿದ್ದಾರೆ. ಇದೊಂದು ಆತಂಕಕಾರಿಯಾದಂತಹ ಬೆಳವಣಿಗೆ. ಬ್ರ್ಯಾಂಡ್ ಬೆಂಗಳೂರನ್ನು ಮಾಡಲು ಹೊರಟಿರುವ ಉಪಮುಖ್ಯಮಂತ್ರಿಗಳು ಮೊದಲು ಪೌರಕಾರ್ಮಿಕರ ಮೂಲ ಸಮಸ್ಯೆಗಳನ್ನು ಬಗೆಹರಿಸಲಿ” ಎಂದು ಒತ್ತಾಯಿಸಿದರು.  

“ಬಿಬಿಎಂಪಿಯಲ್ಲಿ ಕಸ ನಿರ್ವಹಣೆಗೆ ಮಾತ್ರ 32,000 ಪೌರಕಾರ್ಮಿಕರಿದ್ದಾರೆ. ಈ ಪೈಕಿ 700 ಪೌರಕಾರ್ಮಿಕರು ಮಾತ್ರ ಖಾಯಂ ಹೊಂದಿದ್ದಾರೆ. ಇದು ಆಶ್ಚರ್ಯಕರ ಸಂಗತಿ. ಏಕೆಂದರೆ, 16,000 ಪೌರ ಕಾರ್ಮಿಕರಿಗೆ ಪಾಲಿಕೆಯು ನೇರ ವೇತನ ಮಾತ್ರ ನೀಡುತ್ತಿದೆ. 16,000 ಕಾರ್ಮಿಕರು ಗುತ್ತಿಗೆ ಏಜೆನ್ಸಿಗಳ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

Advertisements

“ಪೌರಕಾರ್ಮಿಕರಿಗೆ ಯಾವಾಗಲೂ ಮೂರು ತಿಂಗಳ ಸಂಬಳ ಬಾಕಿ ಉಳಿದಿರುತ್ತದೆ. ಬಿಬಿಎಂಪಿಯು ತನ್ನ ಕಾರ್ಮಿಕರ ಭವಿಷ್ಯದ ಹಾಗೂ ಆರೋಗ್ಯದಂತಹ ಅತಿ ಮುಖ್ಯ ವಿಚಾರದಲ್ಲಿ ಗುತ್ತಿಗೆದಾರರುಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಈ ರೀತಿಯ ನೂರಾರು ಕೋಟಿ ಅವ್ಯವಹಾರಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ” ಎಂದು ಆರೋಪಿಸಿದರು.

“ದಕ್ಷಿಣ ವಲಯದ ಗುತ್ತಿಗೆದಾರರಾದ ಶ್ರೀ ಭುವನೇಶ್ವರಿ ಎಂಟರ್ಪ್ರೈಸಸ್, ಹಠಾರಿ ಸೆಕ್ಯೂರಿಟಿ ಸರ್ವಿಸಸ್, ನೋವೇಲಿ, ಸೆಕ್ಯೂರಿಟಿ ಸರ್ವಿಸಸ್, ಡೈರೆಕ್ಟ್ ವೆಲ್ ಸೆಕ್ಯೂರಿಟಿ ಸರ್ವಿಸಸ್, ಡಿಟೆಕ್ಟ್ ವೆಲ್ ಸೆಕ್ಯೂರಿಟಿ ಸರ್ವಿಸಸ್, ಕುಮಾರ್ ಸಿ ಇನ್ನುಳಿದ ವಲಯಗಳ ಗುತ್ತಿಗೆದಾರರುಗಳು ಇಎಸ್ಐ ಪಿಎಫ್ ಕಟ್ಟಿರುವ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಸಲ್ಲಿಸಿಲ್ಲ. ಬಿಬಿಎಂಪಿಯು ಸಹ ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದರು.

“ಲಭ್ಯ ಮಾಹಿತಿಯ ಪ್ರಕಾರ ಆರ್ ಆರ್ ನಗರ ವಲಯದಲ್ಲಿ ಮಾತ್ರವೇ 2018/19 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯ ಪ್ರಕಾರ 14 ವಾರ್ಡ್‌ಗಳ ಪೈಕಿ ಕೇವಲ 9 ವಾರ್ಡ್‌ಗಳಲ್ಲಿ ಆಯ್ದ ಕೆಲವೇ ತಿಂಗಳುಗಳು ಮಾತ್ರ ಇಎಸ್ಐ /ಪಿಎಫ್ ಅನ್ನು ಪಾವತಿ ಮಾಡಿದ್ದಾರೆ. ₹7,14,31,668 ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ” ಎಂದು ಹೇಳಿದರು.

“ಈ ವಲಯ ಒಂದರಲ್ಲೇ 18,636 ಪೌರಕಾರ್ಮಿಕರು ಇದ್ದಾರೆಂದು ಲೆಕ್ಕ ನೀಡಿರುವುದು ತೀರ ಅವಾಸ್ತವ ಸಂಗತಿ. ಈ ಸಂಖ್ಯೆಯಲ್ಲಿಯೇ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಬೃಹತ್ ಹಗರಣದ ಹಿಂದೆ ಬಲಾಢ್ಯ ರಾಜಕಾರಣಿಗಳು ಮತ್ತು ಅಧಿಕಾರಿಗಳ ನೇರ ಕೈವಾಡವಿದೆ. ತನಿಖೆಯ ಮೂಲಕವೇ ಇದು ಹೊರಬೀಳಲು ಸಾಧ್ಯ” ಎಂದು ಆರೋಪಿಸಿದರು.

ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಮಾತನಾಡಿ, “ಘನ ತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ ಅಲ್ಲಿನ ಕಾರ್ಮಿಕರಿಗೆ ಪಾಲಿಕೆಯಿಂದ ನೇರ ವೇತನ ಪಾವತಿ ಇದುವರೆಗೂ ಆಗಿಲ್ಲ. ಗುತ್ತಿಗೆದಾರರು ಕಟ್ಟಡ ಕಾರ್ಮಿಕರ ಸೆಸ್ ಅನ್ನು ಸಹ ಕಟ್ಟಿಲ್ಲ. ಇದರಿಂದಲೇ ಬಿಬಿಎಂಪಿ ಹಾಗೂ ಗುತ್ತಿಗೆದಾರರ ನಡುವಿನ ಅಕ್ರಮ ಒಳ ಒಪ್ಪಂದದ ಸುಳಿವು ಸಿಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಪತ್ತೆಯಾದ ಮಕ್ಕಳನ್ನು ಮೂರು ಗಂಟೆಗಳಲ್ಲಿ ಪತ್ತೆ ಮಾಡಿದ ಪೊಲೀಸರು

“ಈ ವಿಭಾಗದ ಕಾರ್ಮಿಕರು ಬಹುದಿನಗಳಿಂದ ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು ಸಹ ಯಾವೊಂದು ನೋಟಿಸ್ ಅನ್ನು ಸಹ ಇದುವರೆಗೂ ಬಿಬಿಎಂಪಿ ಹಾಗೂ ಅಲ್ಲಿನ ಗುತ್ತಿಗೆದಾರರಿಗೆ ನೀಡದಿರುವುದು ಗಮನಿಸಿದರೆ ಕಾರ್ಮಿಕ ಇಲಾಖೆಯು ಕಾರ್ಮಿಕ ರಕ್ಷಣೆಗಾಗಿ ಇದೆಯೋ ಅಥವಾ ಗುತ್ತಿಗೆದಾರರ ರಕ್ಷಣೆಗೆ ಇದೆಯೋ ಎಂಬ ಅನುಮಾನ ಮೂಡುತ್ತದೆ”  ಎಂದು ತಿಳಿಸಿದರು.

“ಪೌರ ಕಾರ್ಮಿಕರ ರಕ್ತವನ್ನು ಮಾರಿಕೊಂಡು ಬಿಬಿಎಂಪಿ ಹಾಗೂ ಅಲ್ಲಿನ ಗುತ್ತಿಗೆದಾರರು ಬಿಎಂಡಬ್ಲ್ಯೂ, ಆಡಿ,  ಮರ್ಸಿಡಿಸ್ ಕಾರ್‌ಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವುದು ದುರ್ದೈವದ ಸಂಗತಿ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಡಾಕ್ಟರ್ ಸತೀಶ್ ಕುಮಾರ್, ಜಗದೀಶ್ ಚಂದ್ರ, ಮೃತ್ಯುಂಜಯ, ವಿಶ್ವನಾಥ್ ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X