ಕ್ರೀಡಾ ಪಂದ್ಯಗಳು ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವಾಗ ಆಡಳಿತ ಮಂಡಳಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುತ್ತದೆ. ಬಾಂಗ್ಲಾದೇಶ-ಶ್ರೀಲಂಕಾ ನಡುವಣ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದ ವೇಳೆ ಹಾವು ಏಕಾಏಕಿ ಮೈದಾನಕ್ಕೆ ನುಗ್ಗಿದೆ.
ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿದ್ದ ಮೊದಲ ಏಕದಿನ ಪಂದ್ಯದ ವೇಳೆ ಮೈದಾನಕ್ಕೆ ಹಾವು ನುಗ್ಗಿದೆ. ಅಲ್ಲದೆ ಕೆಲ ಹೊತ್ತು ಮೈದಾನದಲ್ಲೇ ಓಡಾಡಿಕೊಂಡಿದೆ. ಹಾವು ಬಂದ ಕಾರಣ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತು. ಆಟಗಾರರು ಸ್ವಲ್ಪ ಗಾಬರಿಗೊಂಡರು.
ಆ ಬಳಿಕ ಭದ್ರತಾ ಸಿಬ್ಬಂದಿಗಳು ಆಗಮಿಸಿ, ಹಾವನ್ನು ಮೈದಾನದಿಂದ ಹೊರಹಾಕುವಲ್ಲಿ ಯಶಸ್ವಿಯಾದರು. ಆ ನಂತರ ಪಂದ್ಯವನ್ನು ಮುಂದುವರೆಸಲಾಯಿತು. ಇದೀಗ ಮೈದಾನದಲ್ಲಿ ಓಡಾಡುತ್ತಿದ್ದ ಹಾವಿನ ವಿಡಿಯೋ ವೈರಲ್ ಆಗಿದೆ.
ಇದನ್ನು ಓದಿದ್ದೀರಾ? ಅಮನ್ಜೋತ್ ಆಲ್‌ರೌಂಡರ್ ಆಟ: ಇಂಗ್ಲೆಂಡ್ ವಿರುದ್ಧ ಭಾರತದ ವನಿತೆಯರಿಗೆ ಸತತ 2ನೇ ಜಯ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್ಗಳಲ್ಲಿ 244 ರನ್ಗಳಿಸಿ ಆಲೌಟ್ ಆಗಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ 167 ರನ್ಗಳಿಗೆ ಆಲೌಟ್ ಆಗಿತು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ 77 ರನ್ಗಳ ಭರ್ಜರಿ ಜಯ ಸಾಧಿಸಿದೆ.
#snake #Cricket pic.twitter.com/Y5KMfE94aZ
— ABHISHEK PANDEY (@anupandey29) July 3, 2025