ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸಭೆಯಲ್ಲಿ ಹಲವು ನಿರ್ಣಯಗಳು

Date:

Advertisements

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಮತ್ತು ಅಭಿವೃದ್ಧಿ ಶಿಕ್ಷಣ ತಜ್ಞರಾದ ನಿರಂಜನಾರಾಧ್ಯ ವಿ.ಪಿ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಸಮಿತಿ ಸಭೆಯು ದಿನಾಂಕ : 29.06.2025 ರಂದು ಬೆಂಗಳೂರಿನಲ್ಲಿ ನಡೆಯಿತು.

ಈ ಸಭೆಯಲ್ಲಿ ರಾಜ್ಯದ ವಿವಿಧ ಶೈಕ್ಷಣಿಕ ಜಿಲ್ಲೆಗಳಿಂದ ರಾಜ್ಯ ಸಮಿತಿ ಸದಸ್ಯರು ಭಾಗವಹಿಸಿದ್ದರು .

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ರಾಜ್ಯಸಮಿತಿ ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳು ತೆಗೆದುಕೊಂಡಿರುತ್ತೇವೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisements
1001842138

ಸಭೆಯಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ, ಶಿಕ್ಷಣ ಹಕ್ಕು ಕಾಯಿದೆಯ ಪರಿಣಾಮಕಾರಿ ಜಾರಿ ಹಾಗು ಶಾಲಾ ಹಂತದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಬಲವರ್ಧನೆ ಕುರಿತಂತೆ ಹಲವು ವಿಚಾರಗಳನ್ನು ಕೂಲಂಕುಷವಾಗಿ ಚರ್ಚಿಸಲಾಗಿದೆ ಎಂದು ತಿಳಿಸಲಾಗಿದೆ.

ವಿಸ್ತ್ರತ ಚರ್ಚೆಯ ನಂತರ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಲು ಈ ಕೆಳಗಿನ ನಿರ್ಣಯಗಳನ್ನು ಒಮ್ಮತದಿಂದ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆ ೨೦೦೯ ನ್ನು ಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು. ಈ ಕ್ರಿಯಾ ಯೋಜನೆ ಜಾರಿಗೆ ಸರ್ಕಾರ ಅಗತ್ಯ ಹಣಕಾಸನ್ನು ಒದಗಿಸಬೇಕು .

ಪೂರ್ವ ಪ್ರಾಥಮಿಕದಿಂದಲೇ ಅಂಗ್ಲ ಮಾಧ್ಯಮ ಜಾರಿಗೊಳಿಸುವುದನ್ನು ಕೈಬಿಟ್ಟು, ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಕನಿಷ್ಠ 8ನೇ ತರಗತಿಯವರೆಗೆ ತಾಯ್ತುಡಿ ಕಲಿಕೆಯನ್ನು ಜಾರಿಗೊಳಿಸಬೇಕು.

ರಾಜ್ಯದಲ್ಲಿ ತ್ರಿಭಾಷ ಸೂತ್ರದ ಬದಲು ದ್ವಿಭಾಷ ಸೂತ್ರವನ್ನು ಜಾರಿಗೊಳಿಸಬೇಕುಆಂಗ್ಲ ಭಾಷೆಯನ್ನು ಒಂದು ಭಾಷೆಯನ್ನಾಗಿ ಪ್ರಭುತ್ವದ ಮಟ್ಟಕ್ಕೆ ಕಲಿಸಲು ನುರಿತ ಆಂಗ್ಲ ಭಾಷಾ ಶಿಕ್ಷಕರನ್ನು ನೇಮಿಸಬೇಕು. ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸಲು ಅಗತ್ಯ ಸಂಪಂನ್ಮೂಲ ಮತ್ತು ತರಬೇತಿಯನ್ನು ನೀಡಬೇಕು ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಸರ್ಕಾರಿ ಶಾಲಾ ಕಾಲೇಜುಗಳಲ್ಲಿಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಳನ್ನು ಮೀಸಲಿಡಬೇಕು, ಪದವಿ ಪೂರ್ವ ಶಿಕ್ಷಣದವರೆಗೆ ಸರ್ಕಾರಿ ಶಾಲೆ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಎಲ್ಲಾ ವೃತ್ತಿಪರ ಕೋರ್ಸ್ ಗಳಲ್ಲಿ ಕನಿಷ್ಠ ಶೇಕಡ 25 ರಷ್ಟು ಸೀಟುಗಳನ್ನು ಮೀಸಲಿಡಬೇಕು, ಹಾಗೂ ಶಿಕ್ಷಕರ ನೇಮಕಾತಿಯನ್ನು ಅವರ ನೇಮಕಾತಿಯ ಸಂದರ್ಭದಲ್ಲಿ ಆಯ್ಕೆಯಾದ ತಾಲ್ಲೂಕಗಳಿಗೆ ಸೀಮಿತಗೊಳಿಸಿ, ಆಯಾ ತಾಲ್ಲೂಕು ಕೇಂದ್ರಗಳಲ್ಲಿಯೇ ವಾಸಿಸುವಂತೆ ಕಡ್ಡಾಯಗೊಳಿಸಬೇಕು.

ಶಿಕ್ಷಕರ ತರಬೇತಿಯು ಪೋಷಕರು/ಎಸ್‌ಡಿಎಂಸಿ/ಸಮುದಾಯದ ಹಕ್ಕುಗಳ ವಿಷಯವನ್ನು ಒಳಗೊಂಡಿರಬೇಕು ಹಾಗೂ ಸಮುದಾಯದೊಂದಿಗೆ ಬಾಂಧವ್ಯವನ್ನು ಬೆಳೆಸುವುದು ಶಾಲೆ/ಶಿಕ್ಷಕರ ಕರ್ತವ್ಯ ಎಂಬುದನ್ನು ತರಬೇತಿ ಒಳಗೊಂಡಿರಬೇಕು,ಎಲ್ಲಾ ಶಾಲೆಗಳಲ್ಲಿ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕು .

ಸರ್ಕಾರಿ ಶಾಲೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ಭರವಸೆ ಮೂಡಿಸಲು ಮತ್ತು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು, ಎಲ್ಲಾ ಸರ್ಕಾರಿ ನೌಕರರು ಮತ್ತು ಜನ ಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಸೂಕ್ತ ಕಾನೂನನ್ನು ರೂಪಿಸಬೇಕು.

1001842040

ಒಂದು ಕಿಲೋ ಮೀಟ‌ರ್ ವ್ಯಾಪ್ತಿಯಲ್ಲಿನ ಎಲ್ಲಾ ಶಾಲೆಗಳ ಸ್ಕೂಲ್ ಮ್ಯಾಪಿಂಗ್ ಕೈಗೊಳ್ಳಬೇಕು ಅದರ ಅನ್ವಯ ಈಗಾಗಲೇ ಸರ್ಕಾರಿ/ ಸರ್ಕಾರಿ ಅನುದಾನಿತ ಕಿರಿಯ, ಹಿರಿಯ ಪ್ರಾಥಮಿಕ ಹಾಗು ಪ್ರೌಢ ಶಾಲೆಯಿದ್ದಲ್ಲಿ, ಎಷ್ಟೇ ಒತ್ತಡವಿದ್ದರೂ ಖಾಸಗಿ ಅನುದಾನರಹಿತ ಶಾಲೆಗಳಿಗೆ ಅನುಮತಿ ನೀಡಬಾರದು, ಬದಲಿಗೆ ಸರ್ಕಾರಿ/ ಸರ್ಕಾರಿ ಅನುದಾನಿತ ಶಾಲೆಗಳನ್ನು ನೆರೆಹೊರೆಯ ಶಾಲೆಯನ್ನಾಗಿ ಅಭಿವೃದ್ಧಿಪಡಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಗಳು ಅಗತ್ಯವಿದ್ದಲ್ಲಿ ಹೊಸ ಶಾಲೆಗಳನ್ನು ಸರಕಾರ ತೆರೆಯಬೇಕು.

ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಸುತ್ತೋಲೆ ಹಾಗು ಇತರೆ ಮಾಹಿತಿಗಳನ್ನು ಶಾಲೆಯ ಮುಖ್ಯ ಶಿಕ್ಷಕರ ಜೊತೆಗೆ ಎಸ್ ಡಿ ಎಂಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಾಟ್ಸ್ ಅಪ್ ನಲ್ಲಿ ಹಂಚಿಕೆ ಮಾಡಲು ಕ್ರಮವಹಿಸಬೇಕು,

ಶಾಲೆಯ ಉಳಿತಾಯ ಖಾತೆಯಲ್ಲಿನ ಹಣಕ್ಕೆ ಬ್ಯಾಂಕ್‌ನಿಂದ ಸಿಗುವ ಬಡ್ಡಿಯ ಮೊತ್ತವನ್ನು ಆಯಾ ಶಾಲೆಗಳ ಕೆಲಸ ಕಾರ್ಯಕ್ಕೆ ಬಳಸಲು ಅನುವು ಮಾಡಬೇಕು. ಯಾವುದೇ ಕಾರಣದಿಂದ ಬಡ್ಡಿ ಹಣವನ್ನು ಸರ್ಕಾರ ಹಿಂದಕ್ಕೆ ಪಡೆಯಬಾರದು.

ಆಯಾ ಶಾಲೆಗಳ ಮುಖ್ಯ ಗುರುಗಳು ಪ್ರತೀ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರನ್ನು (ತಂದೆ ಮತ್ತು ತಾಯಿ ಇಬ್ಬರೂ ) ಒಳಗೊಂಡ ವಾಟ್ಸ್ ಆಪ್ ಗುಂಪನ್ನು ರಚಿಸಿ ಸರ್ಕಾರದಿಂದ ಬರುವ ಮಕ್ಕಳ ಕಲಿಕೆ, ಶಾಲಾ ನಿರ್ವಹಣೆ, ಶಾಲಾ ಅನುದಾನ ಮತ್ತು ಗುಣಮಟ್ಟ ಸುಧಾರಣೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಗುಂಪಿನಲ್ಲಿ ಹಂಚಿಕೊಳ್ಳುವಂತೆ ಆದೇಶಿಸಿಬೇಕು.

ಯುಡೈಸ್/ಸ್ಯಾಟ್‌ಗಳ ಮೂಲಕ ಸಂಗ್ರಹಿಸುವ ಶಾಲಾ ಸಂಪನ್ಮೂಲಗಳ ಮಾಹಿತಿ / ಮೂಲಸೌಕರ್ಯ/ವಿದ್ಯಾರ್ಥಿ / ಶಿಕ್ಷಕರ ಇತ್ಯಾದಿ ಮಾಹಿತಿಯು ಈಗಾಗಲೇ ಮುಖ್ಯ ಶಿಕ್ಷಕರಿಗೆ ಲಭ್ಯವಿದ್ದು, ಈ ಎಲ್ಲಾ ಮಾಹಿತಿ ಎಸ್‌ಡಿ ಎಂಸಿ ಸದಸ್ಯರು.ಪೋಷಕರು ಮತ್ತು ಸಾರ್ವಜನಿಕರಿಗೆ ಲಭ್ಯವಾಗುವಂತೆ ಒಂದು ಆಪ್ ನ್ನು ಅಭಿವೃದ್ಧಿಪಡಿಸಿ ಎಲ್ಲಾ ಎಸ್ ಡಿ ಎಮ್ ಸಿ ಸದಸ್ಯರಿಗೆ ಮತ್ತು ಪಾಲಕರಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X