ಬೀದರ್‌ | ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು

Date:

Advertisements

ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ.

ಬೀದರ್‌ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಬುಧವಾರ (ಜು.2) ರಾತ್ರಿ 9 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.

ಘೋಡಂಪಳ್ಳಿ ಗ್ರಾಮದ ಲಕ್ಷ್ಮಿಕಾಂತ್ ಜೋಶಿ ಅಲಿಯಾಸ್​​ ಕಾಂತು (45) ಮತ್ತು ತಾಯಿ ಶಾರದಾಬಾಯಿ (86) ಹಾಗೂ ಅದೇ ಗ್ರಾಮದ ಇನ್ನೋರ್ವ ಯುವಕ ರವಿ (18) ಮೃತರು. ಒಂದೇ ದಿನ ತಾಯಿ-ಮಗನ ಸಾವು ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

Advertisements

ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಬಾವಿಯೊಂದಕ್ಕೆ ಬಿದ್ದಿದೆ. ಚಾಲಕ ಸೇರಿ ವಾಹನದಲ್ಲಿದ್ದ ಒಟ್ಟು 7 ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಗಾಯಗೊಂಡ ಐದು ಜನರನ್ನು ಬೀದರ್‌ ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೀದರ್‌ ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಅಪಘಾತ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X