ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.ಆಕಾಶ್ ಅವರ ತಂದೆ-ತಾಯಿ ಕೆಲಸಕ್ಕೆ ಹೋಗಿದ್ದರೆ, ಪತ್ನಿ ತವರು ಮನೆಗೆ ತೆರಳಿದ್ದರು.
ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸಾಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.
ಈ ವೇಳೆ ಪೊಲಿಸರಿಗೆ ಐ ಆಮ್ ಸಾರಿ ಅಮ್ಮಾ, ಅಪ್ಪಾ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು. ಆಕಾಶ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.