ದೊಡ್ಡಬಳ್ಳಾಪುರದ ಗ್ರಾಮದಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಣೆ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸುವ ಮೂಲಕ ಅಸ್ಪೃಶ್ಯತೆ ಪಾಲಿಸುತ್ತಿರುವ ಕಾನೂನುಬಾಹಿರ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದಲ್ಲಿ ಒಟ್ಟು 250 ಮನೆಗಳಿವೆ. ಆ ಪೈಕಿ 150ಕ್ಕೂ ಹೆಚ್ಚು ಮನೆಗಳು ದಲಿತ ಸಮುದಾಯಕ್ಕೆ ಸೇರಿದ್ದು, ಗ್ರಾಮದೇವತೆ ಏಳಿಗಮ್ಮ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

‘ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ’ ಎಂದು ಹೇಳಿ ವಿಜ್ಞಾನಿಗಳು ಚಂದ್ರಲೋಕಕ್ಕೆ ಹೋಗಿ ಸಾಧನೆ ಮಾಡುತ್ತಿದ್ದರೆ, ಗ್ರಾಮಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು, ಜಾತಿ ನಿಂದನೆಗಳು ಎಗ್ಗಿಲ್ಲದಂತೆ ನಡೆಯುತ್ತಲೇ ಇದೆ. ಗೂಳ್ಯ ಗ್ರಾಮದಲ್ಲಿ ಹಬ್ಬ-ಹರಿದಿನಗಳಲ್ಲಿ ದಲಿತರನ್ನು ಅತ್ಯಂತ ಶೋಚನೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ದೇವಸ್ಥಾನದ ಹೊರಗಿನಿಂದಲೇ, ದೇವರನ್ನು ನೋಡಬೇಕಾದ ದುಸ್ಥಿತಿ ಇನ್ನೂ ಜೀವಂತವಾಗಿದೆ ಎಂದು ಗ್ರಾಮದ ದಲಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಏಳಿಗಮ್ಮ ದೇವಾಲಯದಲ್ಲಿ ಸವರ್ಣೀಯರು 100 ವರ್ಷಗಳಿಂದಲೂ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ಇದುವರೆಗೂ ದಲಿತರಿಗೆ ಪ್ರವೇಶ ನೀಡಿಲ್ಲ. ದೇವಾಲಯದಲ್ಲಿ ಪೂಜೆ ಮಾಡುತ್ತಿರುವ ಪೂಜಾರಿ ಬಚ್ಚೇಗೌಡ ಸೇರಿದಂತೆ ಸವರ್ಣೀಯ ವ್ಯಕ್ತಿಗಳು ದಲಿತರನ್ನು ‘ನೀವು ಹೊಲೆಯರು, ಮಾದಿಗರು ದೇವಾಲಯದ ಒಳಗೆ ಬಂದರೆ, ದೇವಸ್ಥಾನ ಮೈಲಿಗೆ ಆಗುತ್ತದೆ’ ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ಗ್ರಾಮದ ದಲಿತ ಮಹಿಳೆ ಶಕುಂತಲಮ್ಮ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಪೂಜಾರಿ ಬಚ್ಚೇಗೌಡ ದಲಿತರನ್ನು ದೇವಸ್ಥಾನದ ಬಾಗಿಲಿನಲ್ಲಿಯೇ ನಿಲ್ಲಿಸುವುದರಿಂದ ನಮಗೆ ತುಂಬಾ ನೋವಾಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಬದುಕಲು ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಆದರೆ ನಮ್ಮ ಹಳ್ಳಿಯಲ್ಲಿ ಮೇಲ್ಜಾತಿಗರ ದೌರ್ಜನ್ಯಗಳಿಂದ ನಮಗೆ ಸ್ವಾತಂತ್ರ್ಯ, ದೇವಸ್ಥಾನ ಪ್ರವೇಶ ಸೇರಿದಂತೆ ಇನ್ನಿತರ ಹಕ್ಕುಗಳು ಸಿಕ್ಕಿಲ್ಲ ಮತ್ತು ನಮ್ಮ ಮೇಲಿನ ಶೋಷಣೆಗಳು ನಿಂತಿಲ್ಲ ಎಂದು ಬೇಸರಗೊಳ್ಳುತ್ತಾರೆ ಶಕುಂತಲಮ್ಮ.

‘ದೇವಸ್ಥಾನದೊಳಗೆ ಪ್ರವೇಶ ನೀಡಿ’ ಎಂದು ಮನವಿ ಮಾಡಿದರೆ, ನೀವು ದಲಿತರಿದ್ದೀರಿ, ದೇವಸ್ಥಾನದ ಒಳಗೆ ಬಂದರೆ ನಿಮಗೆ ಲಕ್ವಾ ಹೊಡೆಯುತ್ತದೆ. ನಿಮ್ಮ ಕುಟುಂಬಗಳು ಕಷ್ಟಕ್ಕೆ ಸಿಲುಕುತ್ತವೆ ಎಂದು ಹೆದರಿಸುತ್ತಾರೆ. ಸದ್ಯದಲ್ಲೇ ಊರ ಜಾತ್ರೆ ನಡೆಯಲಿದೆ. ಅದಕ್ಕೆ ಪ್ರತಿಮನೆಯಿಂದ ಕನಿಷ್ಠ 5 ಸಾವಿರ ರೂ.ಸಂಗ್ರಹ ಮಾಡುತ್ತಿದ್ದಾರೆ. ಜಾತ್ರೆ ಮಾಡಲು ದಲಿತ ಹಣ ಬೇಕು, ಆದರೆ ದಲಿತರನ್ನು ಮಾತ್ರ ದೇವಸ್ಥಾನದ ಒಳಗೆ ಬಿಡುವುದಿಲ್ಲ, ದೇವರನ್ನು ಮುಟ್ಟುವುದಕ್ಕೂ ಬಿಡುವುದಿಲ್ಲ. ಕನಿಷ್ಠ ದೇವರ ಪ್ರಸಾದವನ್ನು ದಲಿತ ಸಮುದಾಯಕ್ಕೆ ಸರಿಯಾಗಿ ನೀಡುವುದಿಲ್ಲ ಎಂದು ದಲಿತರು ಅಳಲು ತೋಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿಗೆ ಮಹಿಳೆ ಪತ್ರ

ಗೂಳ್ಯ ಗ್ರಾಮದ ಅಸ್ಪೃಶ್ಯತೆ ಆಚರಣೆಯ ಕುರಿತು ಯಾವುದೇ ಅಧಿಕಾರಿಗಳು ಗಮನಹರಿಸದೇ ಇರುವುದು ದುರಂತ. ಕೂಡಲೇ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಅಸ್ಪೃಶ್ಯತೆ ಆಚರಣೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ದಲಿತರಿಗೆ ದೇವಸ್ಥಾನದ ಪ್ರವೇಶ ನೀಡಿ ನಮಗೆ ನ್ಯಾಯ ಕೊಡಿಸಬೇಕು ಎಂದು ಶಕುಂತಲಮ್ಮ ಜಿಲ್ಲಾಧಿಕಾರಿಗೆ ಪತ್ರ ಬರೆದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ....

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ...

Download Eedina App Android / iOS

X