ದೇವನಹಳ್ಳಿ ರೈತ ಹೋರಾಟ: ಬೆಂಗಳೂರಿಗೆ ಬಂದಿದ್ದ ಗುಂಡ್ಲುಪೇಟೆ ರೈತ ಕುಸಿದು ಬಿದ್ದು ಸಾವು

Date:

Advertisements

ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾಗಿಯಾಗಲು ಬಂದಿದ್ದ ರೈತರೊಬ್ಬರು ಹಠಾತ್ತನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೇವನಹಳ್ಳಿ ತಾಲೂಕಿನ 1770 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ. ಹೀಗಾಗಿ, ಹೋರಾಟದ ಮುಂದಿನ ಹಾದಿ ಇಂದು ನಿರ್ಧಾರವಾಗಲಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಚಾಮರಾಜನಗರ ಜಿಲ್ಲೆಯಿಂದ ಬಂದಿದ್ದ ರೈತರೊಬ್ಬರು ಬೆಂಗಳೂರು ರೈಲು ನಿಲ್ದಾಣದ ಬಳಿ ಹಠಾತ್ತನೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ.

ಮೃತರನ್ನು ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದ ಈಶ್ವರ್ (55) ಎಂದು ಗುರುತಿಸಲಾಗಿದೆ. ಅವರು ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Advertisements

ಪೊಲೀಸರ ಪ್ರಕಾರ, ಈಶ್ವರ್ ಅವರು ತಮ್ಮ ಗ್ರಾಮಸ್ಥರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿನಿಂದ ರೈಲಿನಿಂದ ಬಂದಿದ್ದಾರೆ. ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈಶ್ವರ್ ಅವರ ಸಾವಿಗೆ ರೈತ ಹೋರಾಟಗಾರರು ಕಂಬನಿ ಮಿಡಿದಿದ್ದಾರೆ. ಹೋರಾಟದ ಸ್ಥಳದಲ್ಲಿ ಈಶ್ವರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X