ದೇವನಹಳ್ಳಿ ರೈತ ಹೋರಾಟ | ಜು.15ರವರೆಗೆ ಗಡುವು ಕೇಳಿದ ಸಿಎಂ ಸಿದ್ದರಾಮಯ್ಯ

Date:

Advertisements

ದೇವನಹಳ್ಳಿ ಭೂಸ್ವಾಧೀನ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜು.4) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರ ಜೊತೆ ಸಭೆ ನಡೆಸಿದರು.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿ ಭೂಸ್ವಾಧೀನ ಕೈಬಿಡಲು ಕಾಂಗ್ರೆಸ್‌ ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಜು.15ರ ತನಕ ಗಡುವು ಕೋರಿದ್ದಾರೆ.

“ಜು.15 ಕ್ಕೆ ಮತ್ತೆ ಸಭೆ ಕರೆತಯುತ್ತೇವೆ. ಅಲ್ಲಿಯ ತನಕ ಭೂಸ್ವಾಧೀನ ಇಲ್ಲ. ಯಾವ ಪ್ರಕ್ರಿಯೆ ಇಲ್ಲ” ಎಂದು ಸಿದ್ದರಾಮಯ್ಯ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ.

Advertisements

“ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

“ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶನ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿದ್ದವನು” ಎಂದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಭೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್‌, ಹೋರಾಟಗಾರ ನೂರ್ ಶ್ರೀಧರ್, ರೈತ ನಾಯಕ ಬಡಗಲಪುರ ನಾಗೇಂದ್ರ, ಎಸ್. ವರಲಕ್ಷ್ಮಿ, ಸಿದ್ದನಗೌಡ ಪಾಟೀಲ್, ಮೀನಾಕ್ಷಿ ಸುಂದರ ಹಾಗೂ ದೇವನಹಳ್ಳಿ ರೈತರಾಗಿ ರಮೇಶ್‌ ಚೀ.ಮಾಚನಹಳ್ಳಿ, ಕಾರಳ್ಳಿ ಶ್ರೀನಿವಾಸ್, ಮುಕುಂದ್ ಚೀ. ಮಾಚನಹಳ್ಳಿ ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

Download Eedina App Android / iOS

X