ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದರು.
ರಾಯಚೂರು ನಗರ, ಲಿಂಗಸೂಗೂರು ನಗರದ ಗಡಿಯಾರ ಚೌಕ್, ಕವಿತಾಳ, ದೇವದುರ್ಗ, ಮಾನ್ವಿ, ಮಸ್ಕಿ ಹಾಗೂ ಸಿಂಧನೂರು ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶುಕ್ರವಾರದ ಪ್ರಾರ್ಥನೆ ಮುಗಿಸಿ ಮುಸ್ಲಿಮರು ಪ್ಲೇ ಕಾರ್ಡ್ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಮಸೀದಿಗಳ ಮುಂದೆ ಮುಸ್ಲಿಂ ಸಮುದಾಯದವರು ಕೈಗೆ ಕಪ್ಪು ಬಟ್ಟೆ ಧರಿಸಿ ಸುಮಾರು ಅರ್ಧ ಕಿ.ಮೀ ವರೆಗೆ ಮಾನವ ಸರಪಳಿ ನಿರ್ಮಿಸಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಹಾನಿ; ದಲಿತ ಸಂಘಟನೆಗಳ ಆಕ್ರೋಶ
ಮುಸ್ಲಿಂ ಧರ್ಮಗುರುಗಳು, ಎಸ್ ಡಿಪಿಐ ಮುಖಂಡರು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

