ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೋಟದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುವಾಗ ಅಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲ್ಲು ಯಂತ್ರದ ಒಳಕ್ಕೆ ಮಹಿಳೆಯ ಸಂಪೂರ್ಣ ದೇಹ ಸಿಲುಕಿದ್ದು, ಸಂಪೂರ್ಣ ಜಜ್ಜಿದಂತಾಗಿದೆ. ಸದ್ಯ ಮೃತ ದೇಹವನ್ನು ಶ್ರೀನಿವಾಸಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ