ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ಹಾಗೂ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್ಪಿ ಮಿಥುನ್ ಕುಮಾರ್ ಜಿ. ಕೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 12 ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ನಂತರ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ, ಹನುಮಂತಪ್ಪ, ಶಿವಮೊಗ್ಗ ಶಾಖಾ ವ್ಯವಸ್ಥಾಪಕರು, ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ಹಾಗೂ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ಹಾಗೂ ಇತರರು ಉಪಸ್ಥಿತರಿದ್ದರು.