ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಎರಡು ಗುಡ್ಡಗಳ ನಡುವೆ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಾಮಾಗಾರಿ ಮಾಡುತ್ತಿರುವುದನ್ನು ಕೂಡಲೆ ನಿಲ್ಲಿಸಬೇಕು ಎಂದು ತಾಲೂಕು ರೈತ ಸಂಘದ ಮುಖಂಡ ಹಾಗೂ ವಲಯ ಕಾರ್ಯದರ್ಶಿ ವೀರೇಶ್ ಆಗ್ರಹಿಸಿದರು.
ಇವರುಗಳು ತಾಲೂಕು ಕಚೇರಿ ಮುಂದೆ ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಭದ್ರಾ ಜಲಾಶಯಕ್ಕೆ ರಕ್ಷಣೆಯಿಲ್ಲವಾಗಿದೆ. ಜಲಾಶಯದ ಎರಡು ಗುಡ್ಡಗಳ ನಡುವೆ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞನಿಕವಾಗಿ ಕಾಮಾಗಾರಿ ಮಾಡುತ್ತಿರುವುದು ಖಂಡನೀಯ ಎಂದರು.
ಈ ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘ ಕಳೆದ ೧೫ ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರು ಜನ ಪ್ರತಿನಿಧಿಗಳು ಅಧಿಕಾರಿಗಳು ನಿರ್ಲಕ್ಷ ತಾಳಿರುವುದು ಹೇಯ ಕೃತ್ಯವಾಗಿದೆ ಎಂದರು.
ಆದ್ದರಿಂದ ಸರ್ಕಾರವನ್ನು ಎಚ್ಚರಿಸಲು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು. ನೀರನ್ನು ಜೋಪಾನವಾಗಿ ನಿರ್ವಹಣೆ ಮಾಡಬೇಕಾದ ನೀರಾವರಿ ಇಲಾಖೆ ಅಧಿಕಾರಿಗಳು ಈ ರೀತಿ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಾಮಾಗಾರಿ ಮಾಡುತ್ತಿರುವುದು ಪ್ರಕೃತಿಗೆ ಮತ್ತು ರೈತರಿಗೆ, ಸಾರ್ವಜನಿಕರಿಗೆ ಮಾಡುತ್ತಿರುವ ದ್ರೋಹವಾಗಿದೆ. ಕಾಮಗಾರಿಯನ್ನು ನಿಲ್ಲಿಸುವುದರ ಜೊತೆಗೆ ನೀರು ವ್ಯರ್ಥವಾಗಿ ಸೋರಿಕೆಯಾಗದಂತೆ ಎಜಿನಿಯರ್‌ಗಳು ಉತ್ತಮ ತಂತ್ರ ಜ್ಞಾನದ ಮೂಲಕ ಸದೃಢವಾದ ತಡೆಗೋಡೆಯನ್ನು ನಿರ್ಮಿಸುವಂತೆ ರೈತ ಸಂಘ ಆಗ್ರಹಿಸುತ್ತದೆ ಎಂದರು.
ತಹಶೀಲ್ದಾರ್ ಪರಸಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಪರಸಪ್ಪ ಮನವಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಹಿರಣ್ಣಯ್ಯ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಶಾಖೆಯ ಮುಖಂಡರುಗಳು, ರೈತರು ಉಪಸ್ಥಿತರಿದ್ದರು.