ವಿವಾಹ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ವರ, ಇಬ್ಬರು ಅಪ್ರಾಪ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರು ಗೋಡೆಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಭಾಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ದಕ್ಷಿಣ) ಅನುಕೃತಿ ಶರ್ಮಾ, “ವರ ಸೇರಿದಂತೆ ವಿವಾಹ ಸಮಾರಂಭಕ್ಕೆ ಹೋಗುತ್ತಿದ್ದವರು ಇದ್ದ ಕಾರು ನಿಯಂತ್ರಣ ತಪ್ಪಿ ಜೆವಾನೈನಲ್ಲಿರುವ ಜನತಾ ಇಂಟರ್ ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಮಾಹಿತಿ ಬಂದ ಕೂಡಲೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಶಿವಮೊಗ್ಗ | ಭೀಕರ ಅಪಘಾತ ಇಬ್ಬರು ಮೃತ್ಯು
ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ವರ ಸೂರಜ್ (24), ಅವರ ಅತ್ತಿಗೆ ಆಶಾ (26), ಅವರ ಮಗಳು ಐಶ್ವರ್ಯ (2), ವಿಷ್ಣು (6) ಸೇರಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
STORY | Groom among 5 killed in accident in UP's Sambhal
— Press Trust of India (@PTI_News) July 5, 2025
READ: https://t.co/t79lpde76a
VIDEO: Additional Superintendent of Police (South) Anukriti Sharma said, "An SUV carrying a wedding party, including the groom, lost control and collided with the wall of Janata Inter College… pic.twitter.com/3lHOFMg5qm
ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರಿನಲ್ಲಿ 10 ಮಂದಿ ಇದ್ದರು. ಸದ್ಯ ಇಬ್ಬರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
