ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಿತ್ ರಾಜ್ ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಆಪ್ತ.
ಅಪಘಾತ ಎಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಸಮಿತ್ ರಾಜ್ ಬಂಧನ ಮಾಡಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ಮಾಡಲಾಗಿದೆ. ಈ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಸಿಕ್ಕಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ
ಇನ್ನು ಈ ವಿಡಿಯೋ ಕರಾವಳಿ ರಾಜಕಾರಣಿಯೊಬ್ಬರದ್ದು ಎಂದೂ ಹೇಳಲಾಗುತ್ತಿದೆ. ಸದ್ಯ ಈ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಇನ್ನು ಈಗಾಗಲೇ ಸಮಿತ್ ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ. ಇದೀಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೆ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
