ಬೆಂಗಳೂರು | ಶಂಕಿತ ಉಗ್ರರಿಗೆ ವಿದೇಶದಿಂದ ಬಂದ ಗ್ರೆನೇಡ್ ; ಸಿಸಿಬಿ ತನಿಖೆ

Date:

Advertisements
  • ಪತ್ತೆಯಾದ ಗ್ರೆನೇಡ್‌ ಪರಿಶೀಲನೆ ನಡೆಸುತ್ತಿರುವ ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು
  • ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ

ರಾಜಧಾನಿ ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಂದು ಮಾಹಿತಿ ಹೊರಬೀಳುತ್ತಿದೆ. ಇದೀಗ, ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ವಿದೇಶದಿಂದ ಬಂದಿರುವುದು ತನಿಖೆಯಿಂದ ತಿಳಿದುಬಂದಿದೆ.

ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳನ್ನು ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರೆನೇಡ್‌ ಮತ್ತು ಪಿಸ್ತೂಲ್‌ಗಳು ಶಂಕಿತ ಉಗ್ರರಿಗೆ ಕೊರಿಯರ್ ಮೂಲಕ ಬಂದು ಸೇರುತ್ತಿದ್ದವು.

ಪ್ರಮುಖ ಆರೋಪಿಗಳಾದ ನಜೀರ್​ ಮತ್ತು ಜುನೈದ್ ಗ್ರೆನೇಡ್ ಮತ್ತು ಪಿಸ್ತೂಲ್ ಬಗ್ಗೆ ಯಾರಿಗೂ ತಿಳಿಸದಂತೆ ಹಾಗೂ ಕೊರಿಯರ್ ಬಂದದನ್ನು ಪ್ಯಾಕ್ ತೆರೆಯದೆ ಹಾಗೇ ಸಂಗ್ರಹಿಸಿಡಲು ಶಂಕಿತ ಉಗ್ರರಿಂದ ಪ್ರಮಾಣ ಮಾಡಿಸಿಕೊಂಡಿದ್ದರೆಂದು ತಿಳಿದುಬಂದಿದೆ.

Advertisements

ಪ್ರಮುಖ ಆರೋಪಿಗಳಾದ ನಜೀರ್ ಮತ್ತು ಜುಲೈದ್ ಮಾತಿನಂತೆ ಶಂಕಿತ ಐವರು ಉಗ್ರರು ಗ್ರೆನೇಡ್ ಮತ್ತು ಪಿಸ್ತೂಲ್‌ಗಳ ಪಾರ್ಸೆಲ್‌ಗಳನ್ನು ಹಾಗೆಯೇ ಸಂಗ್ರಹಿಸಿಡುತ್ತಿದ್ದರು. ಆದರೆ, ಕೃತ್ಯದ ಯೋಜನೆ, ಸಂಚನ್ನು ಬೇರೆ ತಂಡ ರೂಪಿಸುತ್ತಿದ್ದ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ

ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ತನಿಖೆ ವೇಳೆ ತಿಳಿದುಬಂದಿದೆ.

ಸಿಸಿಬಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಶಂಕಿತ ಉಗ್ರ ಮುದಾಸಿರನ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಡ್ರಗ್ಸ್‌ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.  

ಮುದಾಸಿರ್​ ತಾನು ಹೇಳಿದವರಿಗೆ ಡ್ರಗ್ಸ್‌ ನೀಡಬೇಕು ಎಂದು ತನ್ನ ಪ್ರಿಯತಮೆಗೆ ಹೇಳುತ್ತಿದ್ದನು. ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಯುವತಿ ಡ್ರಗ್ಸ್​ ನೀಡುತ್ತಿದ್ದಳು.

ಮುದಾಸಿರ್​ ಬಂಧನವಾದ ದಿನ ಗೆಳತಿಗೆ ಡ್ರಗ್ಸ್​​ ಕೊಟ್ಟು ಮಾರಾಟ ಮಾಡಲು ಹೇಳಿದ್ದನು ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X