ಪಿಟಿಸಿಎಲ್‌ ಹೋರಾಟ ಯಶಸ್ವಿ | 208 ದಿನಗಳ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು

Date:

Advertisements

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಮತ್ತು ಎಸ್‌ಸಿ, ಎಸ್‌ಟಿ ಪಿಟಿಸಿಎಲ್‌ ಕಾಯ್ದೆ ಭೂ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 208 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಹೋರಾಟ ಅಂತ್ಯಗೊಂಡಿದೆ.

ಪ್ರತಿಭಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಭೇಟಿ ನೀಡಿ ಆದೇಶ ಪತ್ರ ನೀಡಿದರು. ಈ ಹಿನ್ನೆಲೆ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟಿದ್ದಾರೆ.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಎಚ್ ಸಿ ಮಹದೇವಪ್ಪ, ಸರ್ಕಾರ ದಲಿತ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ವಿಶೇಷವಾಗಿ ಭೂಮಿ ರಕ್ಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮೊದಲ ಹಂತದಲ್ಲಿ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Advertisements

ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ಶತಶತಮಾನಗಳಿಂದ ಶೋಷಣೆಗೆ ಒಳಗಾದವರಿಗೆ ಮರು ಬದುಕು ಕಟ್ಟಿಕೊಳ್ಳಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. 2017 ರಲ್ಲಿ ಸುಪ್ರೀಂಕೋರ್ಟ್‌ ನೆಕ್ಕಂಟಿರಾಮಲಕ್ಷ್ಮಿ ಮತ್ತು ಕರ್ನಾಟಕ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನಿಂದ ಲಕ್ಷಾಂತರ ಕುಟುಂಬಗಳ ಭೂಮಿ ಕೈ ತಪ್ಪಿದರಿಂದ ಇಡೀ ಸಮುದಾಯ ಭೂಮಿಗಳನ್ನು ಕಳೆದುಕೊಂಡು ಬೀದಿಪಾಲಾಗಿ ತಮ್ಮ ಜೀವನವನ್ನೇ ಕಳೆದುಕೊಂಡಿದ್ದರು. 6 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಸಮುದಾಯವನ್ನು ದಾರಿ ತಪ್ಪಿಸಿತ್ತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠದ ಜ್ಞಾನ ಪ್ರಕಾಶ್‌ ಸ್ವಾಮೀಜಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

ಎಸ್‌ಸಿ, ಎಸ್‌ಟಿ ಪಿಟಿಸಿಎಲ್‌ ಕಾಯ್ದೆ ಭೂ ವಂಚಿತರ ಹೋರಾಟ ಸಮಿತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಮಂಜುನಾಥ್‌ ಮಾತನಾಡಿ, ಚಿತ್ರದುರ್ಗದಲ್ಲಿ ನಾವು ಹೋರಾಟ ಆರಂಭಿಸಿದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ ಕೆ ಶಿವಕುಮಾರ್, ಎಚ್ ಸಿ ಮಹದೇವಪ್ಪ, ಸತೀಶ್ ಜಾರಕಿಹೋಳಿ ಹಲವು ಮುಖಂಡರು ನೀಡಿದ್ದ ಭರವಸೆ ಇದೀಗ ಈಡೇರಿದೆ. ಕಾಂಗ್ರೆಸ್ ಸರ್ಕಾರ ನಮಗೆ ಶಾಶ್ವತ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಿದೆ ಎಂದರು.

ಈ ವೇಳೆ ದಲಿತ ಸಂಘಟನೆಗಳ ಮುಖಂಡರಾದ ರಾಮಣ್ಣ ಬಿ ಎಂ, ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಿ ಗೋಪಾಲ್, ಹರಿರಾಮ್, ಮೂರ್ತಿ ಭೀಮ್ ರಾವ್, ವೇಣುಗೋಪಾಲ್ ಮೌರ್ಯ, ಕವಿ ಕಡ್ಲ ಶಾಂತಕುಮಾರ್, ಚೆನ್ನಸ್ವಾಮಿ, ಈಶ್ವರ್ ಮುಂತಾದ ಗಣ್ಯರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X