ಕಾರವಾರ | ಕೊಡಸಳ್ಳಿ ಬಳಿ ಗುಡ್ಡ ಕುಸಿತ; ರಸ್ತೆ ಸಂಪರ್ಕ ಕಡಿತ

Date:

Advertisements

ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ‌‌. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ ಸಾಹಸ ಪಟ್ಟಿದ್ದಾರೆ.

ಕೊಡಸಳ್ಳಿಯಿಂದ ಬಾಳೆಮನೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದೆ. ರಸ್ತೆಯ ಮೇಲೆ 30 ಮೀಟರ್ ಗೂ ಹೆಚ್ಚು ಪ್ರಮಾಣದ ಗುಡ್ಡ ಕುಸಿದು ಕೊಡಸಳ್ಳಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಹೋಗುವ ಮಾರ್ಗ ಬಂದ್ ಆಗಿತ್ತು. ವಿದ್ಯುತ್ ಗಾರದಲ್ಲಿ ಕಾರ್ಯ ನಿರ್ವಹಿಸುತಿದ್ದ 25 ಜನ ಸಿಬ್ಬಂದಿ ಹಾಗೂ ಕೊಡಸಳ್ಳಿಗೆ ತೆರಳಿದ್ದ ಬಸ್ ಸಹ ಸಂಚರಿಸಲಾಗದೇ ಸಿಲುಕಿಕೊಂಡಿತು.

ತಕ್ಷಣ ಕಾರ್ಯಾಚರಣೆಗೆ ಇಳಿದ ಜಿಲ್ಲಾಡಳಿತ ಹಾಗೂ ಕೆಪಿಸಿ ಇಲಾಖೆಯವರು ಇಂದು ಓರ್ವ ಕಾಲೇಜು ವಿದ್ಯಾರ್ಥಿನಿ ಸೇರಿ ಆರು ಜನರನ್ನು ರಕ್ಷಿಸಿ ಸ್ಥಳಾಂತರಿಸಿದ್ದಾರೆ. ಇನ್ನು ಇದೇ ಭಾಗದಲ್ಲಿ ಬಾಳೆಮನೆ, ಸುಳಗೇರಿ ಗ್ರಾಮವಿದ್ದು 150 ಕ್ಕೂ ಹೆಚ್ಚು ಜನರಿರುವ ಈ ಊರಿಗೆ ಸಂಪರ್ಕ ಕಡಿತವಾಗಿದ್ದು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ ನದಿ ಭಾಗದಲ್ಲಿ ಕಿಲೋಮೀಟರ್ ಗಟ್ಟಲೇ ನಡೆದುಕೊಂಡು ಬಂದು ರಸ್ತೆ ಸಂಪರ್ಕ ಮಾಡಬೇಕಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

Advertisements

ಇದನ್ನೂ ಓದಿ: ಗದಗ  | ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿಧಿಯಾಗಿ ಅಮರಪ್ಪ ಎಚ್ ದೊಡ್ಡಮನಿ ಆಯ್ಕೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X