ಬೀದರ್ ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ʼಮನೆ ಎಂಬುದು ಪ್ರತಿಯೊಬ್ಬನೂ ಕನಸು ಕಾಣುವ ಮೂಲಭೂತ ಅಗತ್ಯ. ಪಿಎಂಎವೈ (ನಗರ) 2.0 ಯೋಜನೆಯ ಮೂಲಕ ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಮನೆ ನೀಡುವ ಗುರಿ ಹೊಂದಲಾಗಿದ್ದು, ಬೀದರ ಲೋಕಸಭಾ ಕ್ಷೇತ್ರದ ಅರ್ಹರು ಈ ಯೋಜನೆಯ ಲಾಭವನ್ನು ಪಡೆಯಬೇಕು ಎಂಬುದು ನನ್ನ ಆಶಯವಾಗಿದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈಗಾಗಲೇ ಯಾವುದೇ ರಾಜ್ಯ ಅಥವಾ ಕೇಂದ್ರ ಸರಕಾರದ ವಸತಿ ಯೋಜನೆಯಡಿ ಮನೆ ಸಹಾಯಧನ ಪಡೆದುಕೊಂಡಿರಬಾರದು. ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಅರ್ಜಿ ಸಲ್ಲಿಕೆಗೆ ಜು.15 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸ್ಥಳೀಯ ನಗರ ಪಂಚಾಯಿತಿ/ಮುನ್ಸಿಪಲ್ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೀದರ್ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ
Super