ಬರ್ಮಿಂಗ್ ಹ್ಯಾಮ್ನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸುವ ಕನಸಿನಿಂದ ಏಳು ಹೆಜ್ಜೆ ಹಿಂದೆ ನಿಂತಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡದ ಏಳು ವಿಕೆಟ್ ಪಡೆಯುವ ಅವಶ್ಯಕತೆ ಇದೆ. ನಾಲ್ಕನೇ ದಿನದಾಟದ ಕೊನೆಯ ಅವಧಿಯಲ್ಲಿ ಎರಡನೇ ಇನಿಂಗ್ಸ್ ಆರಂಭಿಸಿದ ಆತಿಥೇಯ ತಂಡ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್ಗೆ 64 ರನ್ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್ ಗಿಲ್ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್ರೌಂಡರ್ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್ಗೆ 427 ರನ್ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡು 608 ರನ್ ಬೃಹತ್ ಗುರಿ ನೀಡಿತು.
ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್ಗೆ 64 ರನ್ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್ ಗಿಲ್ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್ರೌಂಡರ್ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್ಗೆ 427 ರನ್ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡಿತು.
ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್
ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 180 ರನ್ ಮುನ್ನಡೆ ಸಾಧಿಸಿತ್ತು. ಇದರ ಫಲವಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ಗೆಲುವಿಗೆ 608 ರನ್ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 371 ರನ್ಗಳನ್ನು ಮೆಟ್ಟಿನಿಂತಿದ್ದರಿಂದ ಟೀಮ್ ಇಂಡಿಯಾ ಈ ಬಾರಿ ಇನ್ನು ಹೆಚ್ಚಿನ ಮೊತ್ತವನ್ನು ಬೆನ್ನಟ್ಟಲು ಗುರಿ ನೀಡಿತು. ಗೆಲುವಿಗೆ 7 ವಿಕೆಟ್ 608 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುತ್ತಿರುವ ಇಂಗ್ಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರ ಜಾಕ್ ಕ್ರಾಲಿ (0), ಬೆನ್ ಡಕೆಟ್ (25) ಇಂಗ್ಲೆಂಡ್ ತಂಡದ ಭರವಸೆಯ ಬ್ಯಾಟರ್ ಜೋ ರೂಟ್ (6) ಟೀಮ್ ಇಂಡಿಯಾದ ಶಿಸ್ತು ಬದ್ಧ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಭಾರತದ ಪರ ಆಕಾಶ್ ದೀಪ್ 2, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.
ಭಾರತ ತಂಡ ಬರ್ಮಿಂಗ್ಹ್ಯಾಮ್ನಲ್ಲಿ ಇತಿಹಾಸ ನಿರ್ಮಿಸಲು 7 ವಿಕೆಟ್ ಬೇಕಿವೆ. ಕೊನೆಯ ದಿನದಾಟದ ಮೊದಲಾವಧಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಈ ಪಂದ್ಯದಲ್ಲಿ ಡ್ರಾ ಸಾಧ್ಯತೆಯೂ ಇದೆ. ಇಂಗ್ಲೆಂಡ್ ಸೋಲಿನಿಂದ ಪಾರಾಗಲು ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಹೋರಾಟ ನಡೆಸಲಿದೆ. ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಲು ಭರ್ಜರಿ ಯೋಜನೆ ಮಾಡಿಕೊಂಡಿದೆ.