ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

Date:

Advertisements

ಉಡುಪಿಯ ಖಾಸಗಿ ಕಾಲೇಜಿನ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಬದಲಾಯಿಸಲಾಗಿದೆ. ತನಿಖಾಧಿಕಾರಿಯನ್ನು ಬದಲಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ.

ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ ನಡೆಸುತ್ತಿದ್ದರು. ಇದೀಗ, ಪ್ರಕರಣವನ್ನು ಅವರಿಂದ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರಿಗೆ ಹಸ್ತಾಂತರಿಸಲಾಗಿದೆ. ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು, ವಿದ್ಯಾರ್ಥಿಯೊಬ್ಬರ ಖಾಸಗಿ ವಿಡಿಯೋವನ್ನು ಮೂವರು ವಿದ್ಯಾರ್ಥಿಯರು ಚಿತ್ರೀಕರಿಸಿದ್ದರು. ಆ ಪ್ರಕರಣಕ್ಕೆ ಬಿಜೆಪಿ ಮತ್ತು ಬಿಜೆಪಿ ಬೆಂಬಲಿತ ಸಂಘಟನೆಗಳು ಕೋಮು ಬಣ್ಣ ಬಳಿಯಲು ಯತ್ನಿಸಿದ್ದರು. ಮಹಿಳಾ ಆಯೋಗದ ಸದಸ್ಯ, ನಟಿ ಖುಷ್ಬೂ ಸುಂದರ್‌ ಕೂಡ ಉಡುಪಿಗೆ ಭೇಟಿ ನೀಡಿ, ತನಿಖೆ ನಡೆಸಿದ್ದರು. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮೆರಾ ಅಳವಡಿಸಲಾಗಿಲ್ಲ ಎಂದು ಖುಷ್ಬೂ ಅವರೂ ಹೇಳಿದ್ದರು. ಬಳಿಕ, ಅವರ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಟೀಕೆ ಮಾಡಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X