ಟೀಮ್ ಇಂಡಿಯಾದ ನಾಯಕ ಶುಭ್‌ಮನ್ ಗಿಲ್ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಬರ್ಮಿಂಗ್‌ಹ್ಯಾಮ್‌ನಲ್ಲಿ 2ನೇ ಟೆಸ್ಟ್‌ನಲ್ಲಿ ಇತಿಹಾಸ ಬರೆದಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೆ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಹಲವು ದಾಖಲೆಗಳನ್ನು ಬರೆದರು. ಈ ಮೂಲಕ ಒಂದೇ ಪಂದ್ಯದಲ್ಲಿ ಶುಭಮನ್ ಗಿಲ್ 10 ದಾಖಲೆಗಳನ್ನು ನಿರ್ಮಿಸಿದ್ದಾರೆ.
ನಾಲ್ಕನೇ ದಿನದಾಟವಾದ ಶನಿವಾರ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್‌ನ್ನು 1 ವಿಕೆಟ್ ನಷ್ಟಕ್ಕೆ 64 ರನ್‌ಗಳಿಂದ ಮುಂದುವರೆಸಿತು. ಈ ವೇಳೆ ಕರುಣ್ ನಾಯರ್ ಸಿಕ್ಕ ಅವಕಾಶವನ್ನು ಬಳಸಿಕೊಂಡು ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಕರುಣ್ ನಾಯರ್ 26 ರನ್‌ಗಳಿಗೆ ಔಟ್ ಆಗುತ್ತಿದ್ದಂತೆ, ನಾಯಕ ಶುಭಮನ್ ಗಿಲ್ ಕ್ರೀಸ್‌ಗೆ ಬಂದರು. ಗಿಲ್ ಮೊದಲ ಇನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿ ಅಬ್ಬರಿಸಿದ್ದರು. ಇದೇ ಅಮೋಘ ಆಟವನ್ನು ಎರಡನೇ ಇನಿಂಗ್ಸ್‌ನಲ್ಲೂ ಶುಭಮನ್ ಗಿಲ್ ಮುಂದುವರೆಸಿದರು. ಅಲ್ಲದೆ 10 ದಾಖಲೆಗಳಿಗೆ ತಮ್ಮ ಹೆಸರಿಗೆ ದಾಖಲಿಸಿಕೊಂಡರು.
ಗಿಲ್ ನಿರ್ಮಿಸಿದ ದಾಖಲೆಗಳು
1) ಎರಡನೇ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಶತಕ ಬಾರಿಸುತ್ತಿದ್ದಂತೆ, ಒಂದೇ ಟೆಸ್ಟ್‌ನಲ್ಲಿ 430 ರನ್ ಬಾರಿಸಿದ ಭಾರತದ ನಾಯಕ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಈ ಮೊದಲು ಈ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿತ್ತು. ವಿರಾಟ್ 293 ರನ್ ಬಾರಿಸಿದ್ದರು.
2) ಒಂದೇ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಭಾರತೀಯ ಆಟಗಾರ ಎಂಬ ರೆಕಾರ್ಡ್ ಸಹ ಗಿಲ್ ಬರೆದರು. ಈ ಮೊದಲು ಒಂದೆ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಭಾರತೀಯ ಆಟಗಾರ ಎಂಬ ಹಿರಿಮೆ ಸುನಿಲ್ ಗವಾಸ್ಕರ್ ಅವರದ್ದಾಗಿತ್ತು. ಇವರು 344 ರನ್ ಬಾರಿಸಿದ್ದರು.
3) ಶುಭಮನ್ ಗಿಲ್ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನಿಂಗ್ಸ್‌ಗಳಲ್ಲಿ 585 ರನ್ ಬಾರಿಸುವ ಮೂಲಕ, ನಾಯಕನಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಹಿರಿಮೆ ಹೊಂದಿದರು. ಈ ಮೊದಲು ಈ ದಾಖಲೆ ವಿರಾಟ್ ಕೊಹ್ಲಿ 449 ರನ್ ಬಾರಿಸಿದ್ದರು.
4) ಶುಭಮನ್ ಗಿಲ್ ಮೊದಲ ಇನಿಂಗ್ಸ್‌ನಲ್ಲಿ ದ್ವಿಶತಕ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ ಭಾರತದ ಎರಡನೇ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾದರು. ಈ ಮೊದಲು ಈ ಹಿರಿಮೆ ಸುನಿಲ್ ಗವಾಸ್ಕರ್ (250, 150) ಹೆಸರಿನಲ್ಲಿತ್ತು.
5) ಒಂದೇ ಟೆಸ್ಟ್ ಪಂದ್ಯದಲ್ಲಿ 400ಕ್ಕೂ ಹೆಚ್ಚು ರನ್ ಬಾರಿಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ಹಿರಿಮೆ ಇವರದ್ದಾಗಿದೆ.
6) ಶುಭಮನ್ ಗಿಲ್ 269 ರನ್ ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಬಾರಿಸಿದ ಏಳನೇ ಅಧಿಕ ರನ್.
7) ಶುಭಮನ್ ಗಿಲ್ ಟೆಸ್ಟ್ ನಾಯಕನಾಗಿ 269 ರನ್ ಬಾರಿಸಿ ದಾಖಲೆ ಬರೆದರು. ಈ ಮೂಲಕ ಇವರು ವಿರಾಟ್ ಕೊಹ್ಲಿ (264 ರನ್) ದಾಖಲೆ ಅಳಿಸಿ ಹಾಕಿದರು.
8) ಗಿಲ್ ವಿದೇಶದಲ್ಲಿ ಟೆಸ್ಟ್‌ನಲ್ಲಿ ದ್ವಿಶತಕ ಬಾರಿಸಿದ ಎರಡನೇ ಭಾರತೀಯ ನಾಯಕ ಮತ್ತು ದ್ವಿಶತಕ ಬಾರಿಸಿದ ಆರನೇ ಭಾರತೀಯ ನಾಯಕ
9) ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ ಐದನೇ ಆಟಗಾರ ಎಂಬ ಸಾಧನೆ ಮಾಡಿದರು. ಈ ಮೊದಲು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಕ್ರಿಸ್ ಗೇಲ್, ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದರು.
10) ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಗಿಲ್ ಶತಕ ಬಾರಿಸುತ್ತಿದ್ದಂತೆ ಭಾರತದ ಪರ ನಾಯಕನಾಗಿ ಮೊದಲ ಎರಡು ಪಂದ್ಯಗಳಲ್ಲಿ ಶತಕ ಗಳಿಸಿದ ನಾಲ್ಕನೇ ಆಟಗಾರರಾದರು. ಇವರಿಗೂ ಮೊದಲು ವಿಜಯ್ ಹಜಾರೆ, ಗವಾಸ್ಕರ್ ಮತ್ತು ಕೊಹ್ಲಿ ಈ ಹಿರಿಮೆಗೆ ಪಾತ್ರರಾಗಿದ್ದರು.
ಇದನ್ನು ಓದಿದ್ದೀರಾ? VIDEO | ಅಂತಾರಾಷ್ಟ್ರೀಯ ಪಂದ್ಯ ನಡೆಯುವಾಗ ಮೈದಾನಕ್ಕೆ ನುಗ್ಗಿದ 7 ಅಡಿ ಉದ್ದದ ಹಾವು
93 ವರ್ಷಗಳ ಬಳಿಕ ಟೀಂ ಇಂಡಿಯಾದ ಹೊಸ ಸಾಧನೆ
ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳು ಕಳೆದಿವೆ. ಈ 93 ವರ್ಷಗಳಲ್ಲಿ ಭಾರತದ ಪರ 317 ಆಟಗಾರರು ಕಣಕ್ಕಿಳಿದಿದ್ದಾರೆ. ಆದರೆ ಇವರಿಂದ ಯಾರಿಗೂ ಸಾಧ್ಯವಾಗದ ಹೊಸ ದಾಖಲೆಯೊಂದನ್ನು ಇದೀಗ ಟೀಮ್ ಇಂಡಿಯಾ ನಿರ್ಮಿಸಿದೆ.
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 1014 ರನ್ ಕಲೆಹಾಕಿದೆ. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 587 ರನ್ಗಳಿಸಿದರೆ, ದ್ವಿತೀಯ ಇನಿಂಗ್ಸ್‌ನಲ್ಲಿ 427 ರನ್ ಬಾರಿಸಿದೆ.
ಈ 587+427 ರನ್ಗಳೊಂದಿಗೆ ಟೀಮ್ ಇಂಡಿಯಾ ಟೆಸ್ಟ್ ಪಂದ್ಯವೊಂದರಲ್ಲಿ ಇದೇ ಮೊದಲ ಬಾರಿಗೆ 1000+ ರನ್ ಕಲೆಹಾಕಿದ ಸಾಧನೆ ಮಾಡಿದೆ. ಅಂದರೆ ಕಳೆದ 93 ವರ್ಷಗಳಲ್ಲಿ ಭಾರತ ಒಮ್ಮೆಯೂ ಪಂದ್ಯವೊಂದರಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿರಲಿಲ್ಲ. ಇದಕ್ಕೂ ಮುನ್ನ 2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಬ್ಯಾಟರ್ಗಳು ಎರಡು ಇನಿಂಗ್ಸ್ಗಳ ಮೂಲಕ 916 ರನ್ (705+211) ಕಲೆಹಾಕಿದ್ದು ಶ್ರೇಷ್ಠ ಸಾಧನೆಯಾಗಿತ್ತು.
ಇದೀಗ ಕ್ರಿಕೆಟ್ ಜನಕರ ನಾಡಿನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 587 ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ 427 ರನ್ ಬಾರಿಸಿ (1014 ರನ್ಸ್) ಯಂಗ್ ಇಂಡಿಯಾ ಹೊಸ ಇತಿಹಾಸ ಬರೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 1000+ ರನ್ಗಳಿಸಿದ ವಿಶ್ವದ 6ನೇ ತಂಡ ಎನಿಸಿಕೊಂಡಿದೆ.
ಕ್ರಿಕೆಟ್ ಜನಕರ ನಾಡಿನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 587 ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ 427 ರನ್ ಬಾರಿಸಿ (1014 ರನ್ಸ್) ಯಂಗ್ ಇಂಡಿಯಾ ಹೊಸ ಇತಿಹಾಸ ಬರೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 1000+ ರನ್ಗಳಿಸಿದ ವಿಶ್ವದ 6ನೇ ತಂಡ ಎನಿಸಿಕೊಂಡಿದೆ.