ಮಂಗಳೂರು | ʼಸಿಂಧೂರ ವಿಜಯʼ ಉದ್ಯಾನವನ ಉದ್ಘಾಟನೆ

Date:

Advertisements

ಮಂಗಳೂರಿನ ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್‌ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ʼಸಿಂಧೂರ ವಿಜಯʼ ಉದ್ಯಾನವನದ ಉದ್ಘಾಟನೆ ಜರುಗಿತು.

ಶಾಸಕ ಡಾ ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡಿ, “ರೂ.42.35 ಲಕ್ಷ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕ ಡಾ. ಭರತ್ ಶೆಟ್ಟಿ ಅವರು ತಮ್ಮ ಕ್ಷೇತ್ರದಾದ್ಯಂತ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದ್ದು, ಈ ಯೋಜನೆಯನ್ನು ಕೂಡ ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ. ಮೂಡಾದ ಸದಸ್ಯರು ಅಧಿಕಾರಿಗಳು ಪಾಲಿಕೆಯ ಸದಸ್ಯರು ಅಧಿಕಾರಿಗಳ ಸಮನ್ವಯದೊಂದಿಗೆ ಉತ್ತಮವಾಗಿ ನಿರ್ಮಾಣಗೊಂಡಿದೆ” ಎಂದು ಶ್ಲಾಘೀಸಿದರು.

ಇದನ್ನೂ ಓದಿ: ಪುತ್ತೂರು ಪ್ರೇಮ ವಂಚನೆ ಪ್ರಕರಣ; ಮಹಿಳಾ ಸಂಘಟನೆಯಿಂದ ಎಸ್‌ಪಿಗೆ ಮನವಿ ಸಲ್ಲಿಕೆ

Advertisements

ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, “ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಮೊದಲ ಅವಧಿಯಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೆವು. ಸ್ಥಳೀಯ ಕಾರ್ಪೊರೇಟರ್, ಸಾರ್ವಜನಿಕರು ಇಲ್ಲಿನ ಜಂಕ್ಷನ್‌ನಲ್ಲಿ ಸೈನಿಕರ ಸ್ಮಾರಕವನ್ನು ನಿರ್ಮಿಸುವ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದರು. ಸೈನಿಕರ ತ್ಯಾಗ ಬಲಿದಾನವನ್ನು ಸದಾ ಸ್ಫರಿಸಿಕೊಳ್ಳುವ ನಿಟ್ಟಿನಲ್ಲಿ, ಅವರು ದೇಶದ ರಕ್ಷಣೆಗಾಗಿ ತಮ್ಮ ಕುಟುಂಬವನ್ನು ತೊರೆದು ಗಾಡಿ ಭಾಗದಲ್ಲಿ ಇದ್ದುಕೊಂಡು ದೇಶದ ಜನತೆ ಸುರಕ್ಷತೆಯಿಂದ ಜೀವನ ನಡೆಸಲು ತ್ಯಾಗವನ್ನೇ ಮಾಡುತ್ತಿದ್ದಾರೆ. ಹೀಗಾಗಿ ಈ ಉದ್ಯಾನವನ ನಿರ್ಮಾಣದಲ್ಲಿ ನಮಗೂ ಸಂತೃಪ್ತಿಯನ್ನು ಉಂಟುಮಾಡಿದೆ” ಎಂದರು.

“ನಗರ ಪ್ರವೇಶಿಸುವ ಜಂಕ್ಷನ್‌ನಲ್ಲಿ ಈ ಉದ್ಯಾನವನ ನಿರ್ಮಾಣಗೊಂಡಿರುವುದರಿಂದ ಹೆಚ್ಚು ಆಕರ್ಷಣೀಯವಾಗಿದೆ. ಈ ಪಾರ್ಕನ್ನ ಸೈನಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಅರ್ಪಿಸುವುದರ ಜತೆಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸದಸ್ಯರು ಅಧಿಕಾರಿಗಳಿಗೆ ಈ ಸಂದರ್ಭ ಶ್ಲಾಘನೆಯನ್ನ ವ್ಯಕ್ತಪಡಿಸುತ್ತೇನೆ” ಎಂದರು.

ಇದನ್ನೂ ಓದಿ: ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯ ನೀರಾಜ್ ಚಂದ್ರ ಪಾಲ್ಅಬ್ದುಲ್ ಜಾಲೀಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತಾರಾದ ಮೊಹಮ್ಮದ್ ನಜೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ, ಸಹಾಯಕ ಅಭಿಯಂತರರಾದ ಅಕ್ಬರ್ ಭಾಷಾ,  ಮಹಾನಗರ ಪಾಲಿಕೆಯ ನಿಕಟಪೂರ್ವ  ಸದಸ್ಯರಾದ  ಮನೋಜ್ ಕುಮಾರ್ ಕಿರಣ್ ಕುಮಾರ್ ಕೊಡಿಕಲ್, ರಂಜಿನಿ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಿತೇಶ್ ಕೊಂಡೆ, ಆಶಿತ್ ನೋಂಡ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಮಾಲರಾಯಸಾನ, ಸಂಜಿತ್ ಶೆಟ್ಟಿ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X