ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗದ ವಿರುದ್ಧ ಮಹುವಾ ಮೊಯಿತ್ರಾ ಸುಪ್ರೀಂ ಮೊರೆ

Date:

Advertisements

ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗದ ನಿರ್ದೇಶನದ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌) ಭಾರತದ ಸಂವಿಧಾನದ 14, 19(1)(a),21,325,326ನೇ ವಿಧಿಗಳು ಮತ್ತು 1950 ರ ಜನತಾ ಪ್ರಾತಿನಿಧ್ಯ (ಆರ್‌ಪಿ) ಕಾಯ್ದೆ ಮತ್ತು 1960ರ ಮತದಾರರ ನೋಂದಣಿ (ಆರ್‌ಇಆರ್) ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಜೂನ್ 24ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

Advertisements

ಇದು ದೇಶದಲ್ಲಿ ಅರ್ಹ ಮತದಾರರ ದೊಡ್ಡ ಪ್ರಮಾಣದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಕಾರಣವಾಗಬಹುದು. ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ದುರ್ಬಲಗೊಳಿಸಬಹುದು. ಆದ್ದರಿಂದ ದೇಶದ ಇತರ ರಾಜ್ಯಗಳಲ್ಲಿ ಕೂಡ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆದೇಶಗಳನ್ನು ಹೊರಡಿಸದಂತೆ ಭಾರತೀಯ ಚುನಾವಣಾ ಆಯೋಗವನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಇಂತಹ ಪ್ರಕ್ರಿಯೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರುಗಳಿರುವ ಮತ್ತು ಹಲವು ಬಾರಿ ಮತ ಚಲಾಯಿಸಿರುವ ಮತದಾರರಿಗೆ ತಮ್ಮ ಅರ್ಹತೆಯನ್ನು ಸಾಬೀತುಪಡಿಸುವಂತೆ ಕೇಳಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X