ರಾಯಚೂರಿನಲ್ಲಿ ನಿರ್ಮಾಣವಾಗಿರುವ 60 ಹಾಸಿಗೆಯುಳ್ಳ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಕಳೆದ ಆರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತಾ ಷಾ ಉದ್ಘಾಟಿಸಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ ಇನ್ನೂ ಕೆಲಸ ಪ್ರಾರಂಭವಾಗಿಲ್ಲ. ಬಡ ಜನರಿಗೆ ತುರ್ತಾಗಿ ಆಸ್ಪತ್ರೆ ಪ್ರಾರಂಭಿಸಬೇಕು ಎಂದು ದಲಿತ ಸಂಘರ್ಷ ಸಮಿತಿ(ಭೀಮವಾದ) ಜಿಲ್ಲಾ ಸಂಚಾಲಕ ನರಸಿಂಹಲು ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಅವರುಮಾತನಾಡಿದರು. “ರಾಷ್ಟಿಯ ಆರೋಗ್ಯ ಅಭಿಯಾನ ಯೋಜನೆಯಡಿ ₹15 ಕೋಟಿ ವೆಚ್ಚದ ಆಸ್ಪತ್ರೆ ನಿರ್ಮಾಣವಾಗಿದೆ. ಆದರೆ ಸರ್ಕಾರ ಅಗತ್ಯ ವೈದ್ಯರು, ಸಿಬ್ಬಂದಿಗಳನ್ನು ನೇಮಿಸದೇ ಕೇವಲ ಆಸ್ಪತ್ರೆ ಕಟ್ಟಿಸಿ ಸುಮ್ಮನಾಗಿದೆ. ಹೆರಿಗೆಗಾಗಿ ಬಡ ಜನರು ಸಾವಿರಾರು ರೂಪಾಯಿಗಲನ್ನು ಖಾಸಗಿ ಆಸ್ಪತ್ರೆಗಳಿಗೆ ಪಾವತಿಸುವಂತಾಗಿದೆ” ಎಂದರು.
“ರಿಮ್ಸ್ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ದೊರೆಯುತ್ತಿಲ್ಲ. ಮಹಿಳೆಯರು, ಮಕ್ಕಳು ಅಪೌಷ್ಟಿಕತೆ, ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಮಂಜೂರಾದರೂ ಬಳಕೆ ಮಾಡಿಕೊಳ್ಳುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು
“ಹೊಸದಾಗಿ ನಿರ್ಮಾಣವಾಗಿರುವ ಕಟ್ಟಡ ಶಿಥಿಲಗೊಳ್ಳುವಷ್ಟರಲ್ಲಿ ಆಸ್ಪತೆಗೆ ಬೇಕಿರುವ ವೈದ್ಯರು, ಸಿಬ್ಬಂದಿಗಳನ್ನು ಕೂಡಲೇ ನೇಮಕ ಮಾಡಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಬದಲ್ಲಿ ಜಿಲ್ಲಾ ಸಂಚಾಲಕ ಹನುಮೇಶ ಆರೋಲಿ, ಶೇಕ್ ಅಲಿ, ಎಂ ಡಿ ಮಸೂಮ್, ವಿಜಯಕುಮಾರ ಆರೋಲಿ, ಸೈಯದ್ ವಾಹೀದ ಇದ್ದರು.