ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀರಕ ಅಪಘಾತ ಸಂಭವಿಸಿದ್ದು, ಚಿತ್ರಕಲಾ ಕಲಾವಿದ, ನಟ ಲೋಕೇಶ್ (38) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಶನಿವಾರ ನಸುಕಿನಲ್ಲಿ ಅಪಘಾತ ನಡೆಸಿದೆ. ಎರಡೂ ಕಾಲು, ಎರಡು ಕೈಗಳು ತಂಡಾದ ಸ್ಥಿತಿಯಲ್ಲಿ ಲೋಕೇಶ್ ಅವರ ಮೃತದೇಹ ಪತ್ತೆಯಾಗಿದೆ.
ಅಪಘಾತ ಸ್ಥಳದಲ್ಲಿ ಕಾರ್‌ವೊಂದರ ನಂಬರ್ ಪ್ಲೇಟ್ ಪತ್ತೆಯಾಗಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ಅವರು ನಿಂತಿದ್ದ ಕಾರ್‌ಗೆ ಡಿಕ್ಕಿ ಹೊಡೆದಿರಬಹುದು ಎಂದು ಊಹಿಸಲಾಗಿದೆ. ಪತ್ತೆಯಾದ ನಂಬರ್ ಪ್ಲೇಟ್‌ಯಿದ್ದ ಕಾರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಹಲವು ಕಿರುಚಿತ್ರಗಳಲ್ಲಿ ಅಭಿನಯಿಸಿರುವ ಲೋಕೇಶ್, ಫ್ಯಾಮಿಲಿ ಪ್ಯಾಕ್ ಸಿನಿಮಾದಲ್ಲಿ ಅಭಿನಯಿಸಿದ್ದರು.