ಪುತ್ತೂರು | ಬಾಲಕ-ಬಾಲಕಿಯ ಮೇಲೆ ನೈತಿಕ ಪೊಲೀಸ್‌ಗಿರಿ: ಇಬ್ಬರು ಆರೋಪಿಗಳ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೀರಮಲೆ ಬೆಟ್ಟಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನ ವಿರುದ್ಧ ನೈತಿಕ ಪೊಲೀಸ್ ಗಿರಿ ಮಾಡಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಸಂಘಪರಿವಾರದ ಕಾರ್ಯಕರ್ತರಾದ ಕಡಬದ ಕುಡ್ಮಾರ್‌ನ ಪುರುಷೋತ್ತಮ್ (43) ಮತ್ತು ಪುತ್ತೂರು ಆರ್ಯಾಪು ಗ್ರಾಮದ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಬಾಲಕನ ತಂದೆ ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, “ಘಟನೆ ಜುಲೈ 5, 2025 ರಂದು ಮಧ್ಯಾಹ್ನ ನಡೆದಿದೆ. ದೂರುದಾರರ ಅಪ್ರಾಪ್ತ ಮಗ ಮತ್ತು ಆತನ ಪರಿಚಯದ ಬಾಲಕಿ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟದಲ್ಲಿ ಕುಳಿತಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಅವರನ್ನು ಅಕ್ರಮವಾಗಿ ತಡೆದು, ಅಶ್ಲೀಲ ಪದಗಳಿಂದ ನಿಂದಿಸಿ, ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳು, ಬಾಲಕ ಬೇರೆ ಧರ್ಮಕ್ಕೆ ಸೇರಿದವನು ಎಂದು ನಿಂದಿಸಿ, ಸಾರ್ವಜನಿಕರನ್ನು ಕರೆದು ಅವಮಾನಿಸಿದ್ದಾರೆ ಮತ್ತು ವೀಡಿಯೊ ರೆಕಾರ್ಡ್ ಮಾಡಿ, ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಯಬಿಟ್ಟಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

Advertisements
1001241661

ಬಂಧಿತ ವ್ಯಕ್ತಿಗಳು ನಂತರ ವೀಡಿಯೊವನ್ನು ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೊದಲ್ಲಿ ಬಾಲಕನನ್ನು ಬೇರೆ ಧರ್ಮಕ್ಕೆ ಸೇರಿದವನು ಎಂದು ಗುರುತಿಸಿದ್ದಾರೆ. ಈ ಕೃತ್ಯವು ಕೋಮು ಸೌಹಾರ್ದತೆಗೆ ಭಂಗ ತರಲು ಮತ್ತು ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಅಪ್ರಾಪ್ತ ಬಾಲಕ-ಬಾಲಕಿ ಇಬ್ಬರು ಕೂಡ ಒಂದೇ ಧರ್ಮಕ್ಕೆ ಸೇರಿದವರು. ಬಾಲಕನ ತಂದೆಯ ದೂರಿನ ಆಧಾರದ ಮೇಲೆ, ಪುತ್ತೂರು ನಗರ ಪೊಲೀಸರು ಎಫ್‌ಐಆರ್ ಸಂಖ್ಯೆ 54/2025 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್ 2023 ರ (ಕಿರುಕುಳ, ಬೆದರಿಕೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ವಿಭಾಗಗಳಿಗೆ ಸಂಬಂಧಿಸಿದೆ) ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X