‘ಬ್ರಿಕ್ಸ್’ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ದೇಶಗಳಿಗೆ ಶೇ.10 ಹೆಚ್ಚುವರಿ ಸುಂಕ: ಟ್ರಂಪ್‌ ಎಚ್ಚರಿಕೆ

Date:

Advertisements

ಬ್ರಿಕ್ಸ್‌ನ ಅಮೆರಿಕದ ವಿರೋಧಿ ನೀತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ದೇಶಗಳಿಗೆ ಹೆಚ್ಚುವರಿಯಾಗಿ ಶೇ. 10 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿಕೆ ನೀಡಿರುವ ಟ್ರಂಪ್, ” ಬ್ರಿಕ್ಸ್‌ನ ಅಮೇರಿಕದ ವಿರೋಧಿ ನೀತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ದೇಶಕ್ಕೆ ಹೆಚ್ಚುವರಿಯಾಗಿ ಶೇ. 10 ಸುಂಕ ವಿಧಿಸಲಾಗುತ್ತದೆ. ಈ ನೀತಿಗೆ ಯಾವುದೇ ವಿನಾಯಿತಿ ಇರುವುದಿಲ್ಲ” ಎಂದು ಹೇಳಿದ್ದಾರೆ.

ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ “ಅಮೆರಿಕನ್ ವಿರೋಧಿ ನೀತಿಗಳು” ಎಂಬ ಉಲ್ಲೇಖವನ್ನು ಸ್ಪಷ್ಟಪಡಿಸಿಲ್ಲ. ಮೂಲ ಬ್ರಿಕ್ಸ್ ಗುಂಪು 2009 ರಲ್ಲಿ ನಡೆದ ತನ್ನ ಮೊದಲ ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾದ ನಾಯಕರನ್ನು ಒಟ್ಟುಗೂಡಿಸಿತು. ನಂತರ ಈ ಬಣವು ದಕ್ಷಿಣ ಆಫ್ರಿಕಾವನ್ನು ಸೇರಿಸಿಕೊಂಡಿತು. ಕಳೆದ ವರ್ಷ ಈಜಿಪ್ಟ್, ಇಥೋಪಿಯಾ, ಇಂಡೋನೇಷ್ಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುಎಇ ರಾಷ್ಟ್ರಗಳನ್ನು ಸದಸ್ಯರನ್ನಾಗಿ ಮಾಡಿಕೊಂಡಿತು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಬ್ರಿಕ್ಸ್ ನಾಯಕರು ಬ್ರೆಜಿಲ್‌ನ “ರಿಯೊ ಡಿ ಜನೈರೊ ಘೋಷಣೆ”ಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಅಮೆರಿಕವು ವಿವೇಚನಾರಹಿತವಾಗಿ ಸುಂಕಗಳನ್ನು ಹೆಚ್ಚಿಸುವುದು ಜಾಗತಿಕ ವ್ಯಾಪಾರವನ್ನು ದುರ್ಬಲಗೊಳಿಸುವ ಬೆದರಿಕೆಯಾಗಿದೆ. ಸುಂಕಗಳ ಅನಿಯಂತ್ರಿತ ಏರಿಕೆಯು ಜಾಗತಿಕ ವ್ಯಾಪಾರವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಅಲ್ಲದೆ ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುವುದಲ್ಲದೆ ಅಂತಾರಾಷ್ಟ್ರೀಯ ಆರ್ಥಿಕ ಮತ್ತು ವ್ಯಾಪಾರ ಚಟುವಟಿಕೆಗಳಲ್ಲಿ ಅನಿಶ್ಚಿತತೆಯನ್ನು ಉಂಟುಮಾಡುತ್ತದೆ ” ಎಂದು ಬ್ರಿಕ್ಸ್ ನಾಯಕರು ಹೇಳಿಕೆ ನೀಡಿದ್ದಾರೆ.

ಬ್ರಿಕ್ಸ್ ಈಗ ಒಂದು ಬಲಿಷ್ಠ ಅಂತಾರಾಷ್ಟ್ರೀಯ ಒಕ್ಕೂಟವಾಗಿ ನಿಂತಿದೆ. ವಿಶ್ವದ ಜನಸಂಖ್ಯೆಯ ಸುಮಾರು ಅರ್ಧದಷ್ಟು (ಶೇಕಡಾ 49.5), ಜಾಗತಿಕ ಜಿಡಿಪಿಯ ಸುಮಾರು ಶೇಕಡ 40 ಮತ್ತು ಜಾಗತಿಕ ವ್ಯಾಪಾರದ ಸರಿಸುಮಾರು ಶೇಕಡ 26 ರಷ್ಟನ್ನು ಹೊಂದಿರುವ 11 ಉದಯೋನ್ಮುಖ ಆರ್ಥಿಕತೆ ಹೊಂದಿರುವ ರಾಷ್ಟ್ರಗಳನ್ನು ಒಂದುಗೂಡಿಸುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X