ಬೆಳಗಾವಿ : ಭೀಕರ ಅಪಘಾತ ಸ್ಥಳದಲ್ಲೇ ಮೂವರು ಸಾವು

Date:

Advertisements

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತರು ಕಲಬುರಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕು ಮೂಲದವರಾಗಿದ್ದು, ಕೊಲ್ಲಾಪುರದ ಮಹಾಲಕ್ಷ್ಮಿ ದೇವಿಯ ದರ್ಶನದಿಂದ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ ಹಾಗೂ ಸಂಗು ಅಮರಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆಗೆ ಪ್ರಯಾಣಿಸುತ್ತಿದ್ದ ರಾಧಿಕಾ ಮ್ಯಾಲೇಶಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಬಸ್ ವಿಜಯಪುರ ಕೆಎಸ್‌ಆರ್‌ಟಿಸಿ ಡಿಪೋಗೆ ಸೇರಿದ್ದರೆಂದು ತಿಳಿದುಬಂದಿದೆ. ಅಪಘಾತದ ನಂತರ ಸ್ಥಳಕ್ಕೆ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಬೆಳಗಾವಿ : ಲಕ್ಷ್ಮಣ ಸವದಿಯಿಂದ ನನ್ನ ಮೇಲೆ ಕೆಸ್ ನಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ : ಮಹೇಶ ಕುಮಠಳ್ಳಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಪ್ರಕರಣ ರದ್ದಾದರೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

Download Eedina App Android / iOS

X