ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಜೋರು, ಮುಂದಿನ ಐದು ದಿನ ಭಾರಿ ಮಳೆ

Date:

Advertisements

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮುಂಗಾರು ಮಳೆಗೆ ದಕ್ಷಿಣ ಭಾರತದ ರಾಜ್ಯಗಳು ತತ್ತರಿಸಿವೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದೇಶದ ಬಹುತೇಕ ಭಾಗಗಳಲ್ಲಿ ಮಾನ್ಸೂನ್ ಸಕ್ರಿಯವಾಗಿದೆ. ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹವಾಮಾನವು ಸಂಪೂರ್ಣವಾಗಿ ಬದಲಾಗಲಿದೆ.

ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisements

ಮುಂದಿನ 24 ಗಂಟೆಗಳಲ್ಲಿ ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಭಾರತೀಯ ಹವಾಮಾನ ಇಲಾಖೆ ಕರ್ನಾಟಕದಾದ್ಯಂತ ಜುಲೈ 7, 2025 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ರಿಂದ ಅತಿ ಭಾರೀ ಮಳೆಯಾಗುವ ಸಂಭವವಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ‌.

ಮೀನುಗಾರರೇ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಈ ಬಾರಿ ಗಾಳಿಯು ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ಗಾಳಿಯೊಂದಿಗೆ ಭಾರಿ ಮಳೆ ಆಗುವುದರಿಂದ ಸುರಕ್ಷಿತ ಸ್ಥಳಗಳಲ್ಲಿ ಇರುವುದು ಉಚಿತ ಎಂದು ಹವಾಮಾನ ಇಲಾಖೆ ಜನರಲ್ಲಿ ಮನವಿ ಮಾಡಿದೆ. ಇನ್ನು ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

ಧರ್ಮಸ್ಥಳ ಪ್ರಕರಣ | ದೆಹಲಿ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ: ಸಂಸದ ತೇಜಸ್ವಿ ಸೂರ್ಯ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಲ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ...

ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆ | 60 ದಿನದ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ...

Download Eedina App Android / iOS

X