ಕೋವಿಡ್ ಲಸಿಕೆ ಹಠಾತ್ ಹೃದಯಾಘಾತಕ್ಕೆ ನೇರ ಕಾರಣವಲ್ಲ ಎಂದು ಆರೋಗ್ಯ ಇಲಾಕೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಕೋವಿಡ್ ಲಸಿಕೆಯಿಂದ ಹೃದಯಾಘಾತವಾಗುತ್ತದೆ ಎನ್ನುವ ಆರೋಪವನ್ನು ಅಲ್ಲಗಳೆದಿದ್ದಾರೆ.
“ಕೋವಿಡ್ ಪಾಸಿಟಿವ್ ಬಂದವರಲ್ಲಿ ಕೆಲವರಿಗೆ ಹೃದಯಾಘಾತ ಆಗಿದೆ. ಆದರೆ, ಅದು ಕೋವಿಡ್ ಲಸಿಕೆ ಯಿಂದ ಅಲ್ಲ. ಕೋವಿಡ್ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಕೋವಿಡ್ ಬಂದಾಗ ಸೇವಿಸಿದ ಬೇರೆ ಔಷಧಗಳಿಂದ ಪರಿಣಾಮ ಆಗಿದೆ” ಎಂದು ತಿಳಿಸಿದರು.
“ಕೋವಿಡ್-19 ನಿಂದ ಗುಣಮುಖರಾದವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿವೆ. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ಹೇಳಿದರು.
“ಕೊರೊನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಕೊರೊನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ? ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…
“ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯಪುಸ್ತಕದಲ್ಲಿ ಹೃದಯಾಘಾತದ ಕುರಿತು ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು. ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೆ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು” ಎಂದು ಹೇಳಿದರು.
“ಬೊಜ್ಜು, ಮಧುಮೇಹ ಮತ್ತಿತರ ಸಮಸ್ಯೆಗಳೂ ಹೃದಯಾಘಾತಕ್ಕೆ ಕಾರಣವಾಗಿದೆ. ಹಠಾತ್ ಹೃದಯಘಾತದ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದರು. ಹೀಗಾಗಿ, ಡಾ. ರವೀಂದ್ರಾಥ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿದೆ” ವಿವರಿಸಿದರು.