ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ನನ್ನ ಬಳಿ ಹಣವಿಲ್ಲ: ಕಂಗನಾ ರನೌತ್ ವಿವಾದ

Date:

Advertisements

ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಇಲ್ಲಿಯವರೆಗೂ 78 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಆದರೆ ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆ ನಟಿ ಕಂಗನಾ ರನೌತ್ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ನನ್ನ ಬಳಿ ಹಣವಿಲ್ಲ ಎಂದು ವಿವಾದ ಸೃಷ್ಟಿಸಿದ್ದಾರೆ.

ಭಾನುವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ್ದ ಬಿಜೆಪಿ ಸಂಸದೆ ಕಂಗನಾ ರನೌತ್, ತಮ್ಮ ಬಳಿ ಸಂಪುಟ ಹುದ್ದೆಯೂ ಇಲ್ಲ, ವಿಪತ್ತು ಪರಿಹಾರಕ್ಕಾಗಿ ಹಣವೂ ಇಲ್ಲ. ಸಂಸದರಿಗೆ ಸಂಸತ್ತಿಗೆ ಸೀಮಿತವಾದ ಕೆಲಸವಿದೆ. ನಾವು ಬಹಳ ಸಣ್ಣವರು. ಆದರೆ, ಕೇಂದ್ರದಿಂದ ವಿಪತ್ತು ನಿಧಿಯನ್ನು ಪಡೆಯಲು ನಾನು ಸಹಾಯ ಮಾಡಬಹುದು ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಕಂಗನಾ ಅವರ ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸ್ವಪಕ್ಷದವರೇ ಕಂಗನಾ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮಂಡಿಯಲ್ಲಿ ಪ್ರವಾಹ ಬಂದು ಜನರು ಸಂಕಷ್ಟದಲ್ಲಿದ್ದರೂ ಸಂಸದೆ ಅದರ ಕುರಿತು ಎಲ್ಲಿಯೂ ಮಾತನಾಡಿರಲಿಲ್ಲ.‌

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಜೈರಾಮ್ ಠಾಕೂರ್, ಸಂಸದರ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ, ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಕಾಳಜಿ ವಹಿಸುವವರಿಗಾಗಿ ನೆರವು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಕಾಳಜಿ ವಹಿಸದವರ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಠಾಕೂರ್ ಅವರ ಹೇಳಿಕೆಗಳ ವಿಡಿಯೋವನ್ನು ಹಂಚಿಕೊಂಡ ಕಾಂಗ್ರೆಸ್, “ಸಂಸದ ಕಂಗನಾ ರನೌತ್ ಅವರಿಗೆ ಮಂಡಿಯ ಜನರ ಬಗ್ಗೆ ಕಾಳಜಿ ಇಲ್ಲ. ಇವು ನಮ್ಮ ಮಾತುಗಳಲ್ಲ, ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳೇ ಇದನ್ನು ಹೇಳಿದ್ದಾರೆ ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲೂ ಕೂಡ ಕಂಗನಾ ಬಗ್ಗೆ ಭಾರಿ ಟೀಕೆಗಳು ವ್ಯಕ್ತವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X