ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಡಿವೈಎಸ್ಪಿಯೊಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ.
ಡಿವೈಎಸ್ಪಿ ಶಂಕರಪ್ಪ ವಿರುದ್ಧ ಅವರ ಪತ್ನಿ ದೂರು ನೀಡಿದ್ದು, ನಗರದ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಲೇಜಿಗೆ ಹೋಗುತ್ತಿರುವ ಮಗನಿದ್ದು ಅನ್ಯ ಹೆಣ್ಣಿನ ಸಂಪರ್ಕ ಮಾಡಿ ಹಲ್ಲೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ಹಣಕ್ಕಾಗಿ ಪೀಡಿಸಿದ್ದಾರೆ. ಅಕ್ರಮವಾಗಿ ಆ ಹೆಣ್ಣಿನ ಜೊತೆ ಮದುವೆಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಬೇಕೆಂದು ಡಿಜಿ ಹಾಗೂ ಐಜಿಪಿಗೂ ಡಿವೈಎಸ್ಪಿ ಪತ್ನಿ ದೂರು ನೀಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ
ನನ್ನ ಸಂಸಾರ ಹಾಳು ಮಾಡಬೇಡ ಎಂದು ಆ ಮಹಿಳೆಗೆ ಡಿವೈಎಸ್ಪಿ ಪತ್ನಿ ಪರಿಪರಿಯಾಗಿ ಕೇಳಿಕೊಂಡರೂ ಜೀವ ಬೆದರಿಕೆ ಹಾಕಿದ್ದಾರಂತೆ. ಸದ್ಯ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರದ ಪ್ರಭಾವದಿಂದ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಡಿವೈಎಸ್ಪಿ ಪತ್ನಿ ಆರೋಪಿಸಿದ್ದಾರೆ.