ಗ್ರೇಟರ್ ಬೆಂಗಳೂರು | ವಿಪಕ್ಷ ನಾಯಕರ ವಿಶ್ವಾಸ ಪಡೆದುಕೊಂಡೇ ಮುಂದಿನ ಚರ್ಚೆ: ಡಿ ಕೆ ಶಿವಕುಮಾರ್

Date:

Advertisements

ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ” ಎಂದರು.

“ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ” ಎಂದು ಹೇಳಿದರು.

Advertisements

ಎತ್ತಿನಹೊಳೆ ಯೋಜನೆ ಸಂಬಂಧ ಸಚಿವ ಪರಮೇಶ್ವರ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಎತ್ತಿನಹೊಳೆ ವಿಚಾರವಾಗಿ ಕೆಲವು ಸಮಸ್ಯೆ ಇತ್ತು. ಅವರ ತಾಲೂಕನ್ನು ಕೈಬಿಡಬೇಕು ಎಂಬ ಪ್ರಸ್ತಾವನೆ ಇತ್ತು. ಈ ಭಾಗದಲ್ಲಿ ನೀರು ನಿಲ್ಲಿಸಬೇಕಾಗಿದ್ದು, ಯಾವುದೇ ಹಳ್ಳಿ ಮುಳುಗದಂತೆ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಸ್ಥಳೀಯರೇ ಒಂದೆರಡು ಕೆರೆಗಳ ಬಗ್ಗೆ ಸಲಹೆ ನೀಡಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು” ಎಂದು ತಿಳಿಸಿದರು.

ನಾಳೆ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಹಾಗೂ ಹಾಸನ ಭಾಗದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಅನುಮತಿ ಬಗ್ಗೆ ಚರ್ಚಿಸಲು ಸಮಯಾವಕಾಶ ನಿಗದಿಯಾಗಿದೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಲಾಗುವುದು” ಎಂದು ತಿಳಿಸಿದರು.

ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ ದೆಹಲಿಗೆ ಭೇಟಿ ನೀಡಿದಾಗ ಅಲ್ಲಿಗೆ ಹೋಗಿ ಕೈಮುಗಿದು ಬರುತ್ತೇವೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X