ಕಲಬುರಗಿ | ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

Advertisements
  • 283 ಮನೆಗಳು ಭಾಗಶಃ ಹಾನಿ, 89 ಶಾಲಾ ಕೊಠಡಿ, 38 ಅಂಗನವಾಡಿಗೆ ಹಾನಿ
  • ಜಿಲ್ಲಾದ್ಯಂತ 281 ವಿದ್ಯುತ್ ಕಂಬಗಳು, 35 ವಿದ್ಯುತ್ ಪರಿವರ್ತಕಗಳು ಹಾನಿ

ಮುಂಗಾರು ಕೈಕೊಟ್ಟು ಮಳೆಯೇ ಬರುವುದಿಲ್ಲ. ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಕಲಬುರಗಿ ರೈತರು ಆಗ್ರಹಿಸಿದ್ದರು. ಮುಂಗಾರು ವಿಳಂಬವಾದರೂ ಕಳೆದ 10 ದಿನಗಳಿಂದ ಸುರಿಯತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಜಲಾಶಯಗಳು, ಹಳ್ಳ-ಕೊಳ್ಳಗಳು ಭರ್ತಿಯಾಗುತ್ತಿದ್ದು, ಮಳೆಗೆ ಹಲವು ಮನೆಗಳು ಕುಸಿದಿವೆ. ಕೆಲ ಜನ- ಜಾನುವಾರುಗಳು ಮೃತಪಟ್ಟಿರುವ ಘಟನೆಗಳೂ ಸಂಭವಿಸಿವೆ.

ಜಿಲ್ಲೆಯಲ್ಲಿ ಕಳೆದ ಜೂನ್ 1ರಿಂದ ಈವರೆಗೆ ಸುರಿದ ಭಾರೀ ಮಳೆಗೆ 283 ಮನೆಗಳು ಭಾಗಶಃ ಹಾನಿಗೊಂಡಿದ್ದು, 20 ಕಿ.ಮೀ ರಾಜ್ಯ ಹೆದ್ದಾರಿ, 27.50 ಕಿ.ಮೀ ಜಿಲ್ಲಾ ಹೆದ್ದಾರಿ, 100 ಕಿ.ಮೀ ಗ್ರಾಮೀಣ ರಸ್ತೆಗಳು ಸೇರಿದಂತೆ ಒಟ್ಟು 147 ಕಿ.ಮೀ ರಸ್ತೆ, 84 ಸೇತುವೆಗಳು, 89 ಶಾಲಾ ಕೊಠಡಿಗಳು ಹಾಗೂ 38 ಅಂಗನವಾಡಿ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಜಿಲ್ಲಾಡಳಿತ ಅಂಕಿ ಅಂಶ ನೀಡಿದೆ.

Advertisements

ಆದರೆ, ವಾಸ್ತವವಾಗಿ ಜಿಲ್ಲಾಡಳಿತ ಗಮನಕ್ಕೆ ಬರದೇ ಇರುವ ಎಷ್ಟೋ ಮನೆಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳು, ರಸ್ತೆಗಳು ಹಾನಿಯಾಗಿವೆಯೆಂದು ಹೇಳಲಾಗುತ್ತಿದೆ.

ಭಾರೀ ಮಳೆಯಿಂದ ಜಿಲ್ಲಾದ್ಯಂತ 281 ವಿದ್ಯುತ್ ಕಂಬಗಳು, 35 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿದ್ದು, ಈ ಪೈಕಿ ಕ್ರಮವಾಗಿ 203 ವಿದ್ಯುತ್ ಕಂಬಗಳು ಮತ್ತು 31 ವಿದ್ಯುತ್ ಪರಿವರ್ತಕಗಳನ್ನು ದುರಸ್ತಿಗೊಳಿಸಿ ವಿದ್ಯುತ್ ಪ್ರಸರಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಬೆಣ್ಣೆತೋರಾ, ಕೇರಿ ಭೋಸಗಾ, ಸರಡಗಿ ಬ್ಯಾರೇಜಿನಿಂದ ಕಲಬುರಗಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನಗರದ ಪ್ರತಿ ದಿನದ ಬೇಡಿಕೆ 95 ಎಂಎಲ್‌ಡಿ ಇದ್ದು, ಪ್ರಸ್ತುತ 85 ಎಂಎಲ್‌ಡಿ ಪೂರೈಸಲಾಗುತ್ತಿದೆ. ಜೂನ್ 20ಕ್ಕೆ ನಾರಾಯಣಪುರ ಜಲಾಶಯದಿಂದ 0.2 ಟಿಎಂಸಿ ನೀರು ಬಿಟ್ಟಿದ್ದು, ಸರಡಗಿ ಬ್ಯಾರೇಜಿಗೆ ತಲುಪಲಿದೆ.

ಕಳೆದ ಜುಲೈ 24 ದು ಜೇವರ್ಗಿ ತಾಲೂಕಿನ ಬಿರಾಳ (ಬಿ) ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿತ ಪರಿಣಾಮ ಗ್ರಾಮದ ಬಸಮ್ಮ ಬಸವರಾಜ ಬಳಗಾರ(38) ಅವರು ಮೃತಪಟ್ಟಿದ್ದು, ಮೃತರ ವಾರಸುದಾರರಿಗೆ ಸರ್ಕಾರದ ಮಾರ್ಗಸೂಚಿಯಂತೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಇನ್ನು ಜಿಲ್ಲಾದ್ಯಂತ ಯಾವುದೇ ಜಾನುವಾರುಗಳ ಪ್ರಾಣ ಹಾನಿ ಕುರಿತು ವರದಿಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಶನಿವಾರ ಅಫಜಲಪುರ ತಾಲೂಕಿನ ಹಲವು ಮಳೆ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದಾದ ಹಾನಿ ಕುರಿತು ಪರಿಶೀಲಿಸಿದರು.

ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮಕ್ಕೆ ತೆರಳಿದ ಅವರು, ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು. ಅಂಗನವಾಡಿ ಕೇಂದ್ರದ ಛಾವಣಿ ಮಳೆಯಿಂದ ಸೋರುತ್ತಿದ್ದನ್ನು ಕಂಡು, “ಅಂಗನವಾಡಿ ಕಟ್ಟಡ ಸೇರಿದಂತೆ ತಾಲೂಕಿನಲ್ಲಿ ಅಗತ್ಯವಿದ್ದೆಡೆ ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು” ಎಂದು ಸಿಡಿಪಿಒ ಪ್ರೇಮಾ ಅವರಿಗೆ ಸೂಚಿಸಿದರು.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯಲ್ಲಿ ವ್ಯವಸ್ಥಿತ ಶೌಚಾಲಯ ವ್ಯವಸ್ಥೆ ಮಾಡುವಂತೆ ತಾಲೂಕು ಪಂಚಯಿತಿ ಇಒ ಹಾಗೂ ಪಿಡಿಒಗೆ ಸೂಚಿಸಿದರು.

ಅಫಜಲಪುರ ತಾಲೂಕಿನ ಇಂಚಗೇರಾ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ವೀಕ್ಷಿಸಿದ್ದು, ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ನೀಡುವಂತೆ ತಹಶೀಲ್ದಾರ್ ಸಂಜೀವಕುಮಾರ ದಾಸರ್ ಅವರಿಗೆ ನಿರ್ದೇಶನ ನೀಡಿದರು. ಅಲ್ಲದೆ ಹಿಂಚಗೇರಾ ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ಇತ್ಯಾದಿ ಗ್ರಾಮದ ಮೂಲ ಸೌಕರ್ಯಗಳ ವ್ಯವಸ್ಥೆ ಸರಿಯಾಗಿರುವಂತೆ ನೋಡಿಕೊಳ್ಳಬೇಕು” ಎಂದು ಸ್ಥಳದಲ್ಲಿದ್ದ ತಾಲೂಕು ಪಂಚಾಯಿತಿ ಇಒ ವಿಜಯ ಮಹಾಂತೇಶ್ ಅವರಿಗೆ ಸೂಚಿಸಿದರು.

ಅಫಜಲಪುರ ತಾಲೂಕಿನ ಅತನೂರ ಗ್ರಾಮದ ನಾಡ ಕಚೇರಿಗೆ ಭೇಟಿ ನೀಡಿ ಕಟ್ಟಡ ಹಳೆಯದಾಗಿದ್ದರಿಂದ ಹೊಸ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಘತ್ತರಗಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಳೆಯಿಂದ ಶಾಲಾ ಕೋಣೆ ಛಾವಣಿ ಸೋರಿಕೆ ಕಂಡು, ಕೂಡಲೇ ದುರಸ್ತಿಗೊಳಿಸುವಂತೆ ಸ್ಥಳದಲ್ಲಿದ್ದ ತಹಶೀಲ್ದಾರರಿಗೆ ಸೂಚಿಸಿದರು. ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಶಾಲಾ ಮಕ್ಕಳನ್ನು ಬೇರೆ ಕೋಣೆಯಲ್ಲಿ ಕೂರಿಸಿ ಪಾಠ ಬೋಧಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಅವರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ನಂತರ ಘತ್ತರಗಾ ಸೇತುವೆ ವೀಕ್ಷಣೆ ಮಾಡಿ ನೀರಿನ ಒಳಹರಿವು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜೇವರ್ಗಿ ತಾಲೂಕಿನ ನೇದಲಗಿಗೆ ಭೇಟಿ ನೀಡಿ, ಮಳೆಯಿಂದ ಹಾನಿಗೊಳಾಗದ ಎರಡ್ಮೂರು ಮನೆಗಳನ್ನು ವೀಕ್ಷಿಸಿದರು. ಮನೆಯಿಂದ ಹಾಳಾದ ಮನೆಗಳಿಗೆ ಕೂಡಲೇ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಬೇಕು. ಈವರೆಗೆ ತಾಲೂಕಿನಲ್ಲಿ ಮಳೆಯಿಂದ ಮನೆಹಾನಿ ಕುರಿತು ಸಮಗ್ರ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಜೇರಟಗಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡದ ಪರಿಸ್ಥಿತಿ ಅವಲೋಕಿಸಿ 2 ಲಕ್ಷ ರೂ. ವೆಚ್ಚದಲ್ಲಿ ಕೂಡಲೇ ಕಟ್ಟಡ ದುರಸ್ತಿಗೊಳಿಸುವಂತೆ ಸೂಚಿಸಿದ್ದು, ಹೊಸದಾಗಿ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದಾಗ, ಸಿಡಿಪಿಒ ಮಾತನಾಡಿ, ಈಗಾಗಲೇ ಹೊಸದಾಗಿ ಅಂಗನವಾಡಿ ಕೇಂದ್ರಕ್ಕೆ ಮಂಜೂರಾತಿ ದೊರೆತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ

ಜಿಲ್ಲಾದ್ಯಂತ ಮಳೆಯಿಂದ ಯಾವುದೇ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿನ ಮಳೆಯ ಪರಿಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ್ದು, ಅವರು ಅಗತ್ಯ ಸಲಹೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸಹಾಯವಾಣಿ ಸ್ಥಾಪನೆ

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಭಾರೀ ಮಳೆಯಿಂದ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದಲ್ಲಿ ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 08472-278677, ಟೋಲ್ ಫ್ರೀ ಸಂಖ್ಯೆ 1077ಗೆ ಸಂಪರ್ಕಿಸಲು ಕೋರಲಾಗಿದೆ. ತಾಲೂಕು ಹಂತದಲ್ಲಿ ಅಫಜಲಪುರ 08470-282020, ಆಳಂದ-08477-202428, ಚಿಂಚೋಳಿ-8475200113, ಚಿತ್ತಾಪುರ-08474-236250, ಜೇವರ್ಗಿ 08442-236024, ಕಲಬುರಗಿ-08472-278657/ 278636, ಕಾಳಗಿ 9741680444, ಕಮಲಾಪುರ-7411843393, ಸೇಡಂ 08441-276184, ಶಹಾಬಾದ-08477-202428 ಹಾಗೂ ಯಡ್ರಾಮಿ 8147003348ಕ್ಕೆ ಸಂಪರ್ಕಿಸಬಹುದಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X