ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿಮಲ್ಲು ಹಲಗಿ ಕುರಕುಂದ ಆಗ್ರಹಿಸಿದ್ದಾರೆ.
ಹೃದಯಾಘಾತಕ್ಕೆ ಯುವಕರು ಹೆಚ್ಚು ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹೀಗಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕಡ್ಡಾಯ ಹೃದಯ ತಪಾಸಣೆಗೆ ಒಳಪಡಿಸಬೇಕು. ಈ ಸಂಬಂಧ ಪ್ರತಿಯೊಂದು ಹಳ್ಳಿ, ತಾಲೂಕು, ಜಿಲ್ಲಾ ಹಾಗೂ ರಾಜ್ಯದ್ಯಂತ ರಾಜ್ಯ ಸರ್ಕಾರ ಜಾಗೃತಿ ಮೂಡಿಸಬೇಕು ಎಂದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕು. ಹೃದಯಾಘಾತ ತಪ್ಪಿಸಿಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿ ಜನರಿಗೆ ಆರೋಗ್ಯ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಅನುಭವ ಮಂಟಪ ಶೇ 63ರಷ್ಟು ಪೂರ್ಣ : 2026ರ ಮೇ ತಿಂಗಳಲ್ಲಿ ಉದ್ಘಾಟನೆ : ಸಚಿವ ಈಶ್ವರ ಖಂಡ್ರೆ