ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

Date:

Advertisements

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ ಕರ್ನಾಟಕ (ಎಸ್ ಕೆ ಎಂ)ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ (JCTU) ಪೋಸ್ಟರ್ ಬಿಡುಗಡೆ ಮಾಡಲಾಯಿತು.

1002273788

ಈ ವೇಳೆ ಸಂಯುಕ್ತ ಹೋರಾಟ ಕರ್ನಾಟಕ (ಎಸ್ ಕೆ ಎಂ), ಜೆಸಿಟಿಯು, ಸಿಪಿಐ, ಸಿಪಿಎಂ, ಕರ್ನಾಟಕ ಶ್ರಮಿಕ ಶಕ್ತಿ, ರೈತ ಸಂಘಟನೆ ಸೇರಿದಂತೆ ಹಲವು ಜನಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಜರಿದ್ದು ಪೋಸ್ಟರ್ ಬಿಡುಗಡೆ ಮಾಡಿದರು.‌

ಈ ವೇಳೆ ಮಾತನಾಡಿದ ಮುಖಂಡರು “ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಧ್ವನಿಯೆತ್ತಲಿವೆ.‌ ಕಾರ್ಯಕ್ರಮದಲ್ಲಿ ಎಲ್ಲಾ ಜನಪರ, ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತ, ಎವಿಕೆ ರಸ್ತೆ, ರೇಣುಕಾ ಮಂದಿರ ಮಾರ್ಗದಲ್ಲಿ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ ಪ್ರತಿಭಟನೆ ನಡೆಸಿ ನಂತರ ಜಯದೇವ ವೃತ್ತದಲ್ಲಿ ಬಂದು ಬಹಿರಂಗ ಸಭೆಯ ನಂತರ ಸಮಾರೋಪಗೊಳ್ಳಲಿದೆ” ಎಂದು ತಿಳಿಸಿದರು.

Advertisements
1002273787

“ಪ್ರತಿಭಟನಾ ರ್ಯಾಲಿ ಉದ್ಘಾಟನೆ ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ದಾವಣಗೆರೆ ಜಿಲ್ಲೆಯ ಎಲ್ಲಾ ರೈತ ಸಂಘದ, ಕಾರ್ಮಿಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದು, ಎಲ್ಲಾ ಕಾರ್ಮಿಕರು, ರೈತರು, ಸಾರ್ವಜನಿಕರು ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | “ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ”ವಾಗಿ ಪ್ರೊ. ಬಿ ಕೃಷ್ಣಪ್ಪನವರ ಜನ್ಮದಿನ; ಆದಿ ಕರ್ನಾಟಕ ವಸತಿನಿಲಯದಲ್ಲಿ ಕಾರ್ಯಕ್ರಮ

ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ. ರಾಮಚಂದ್ರಪ್ಪ, ಸಿಪಿಐ ಪ್ರಧಾನ ಕಾರ್ಯದರ್ಶಿ ಚಂದ್ರು ಆವರಗೆರೆ, ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್ ಅವರಗೆರೆ, ರೈತ ಮುಖಂಡ ಮುನಿಯಪ್ಪ, ನಿ. ಡಿವೈಎಸ್ಪಿ ರವಿ ನಾರಾಯಣ್, ಎಐಯುಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ, ಮಧು ತೊಗಲೇರಿ,
ಕರ್ನಾಟಕ ಶ್ರಮಿಕ ಶಕ್ತಿಯ ಸತೀಶ್ ಅರವಿಂದ್, ಆದಿಲ್ ಖಾನ್, ರವಿ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ, ಕಾರ್ಮಿಕ ಮುಖಂಡರಾದ ಐರಣಿ ಚಂದ್ರು, ಲಕ್ಷ್ಮಣ್, ರಫೀಕ್ ಅಹಮದ್ ಹಾಗೂ ಇತರರು ಹಾಜರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X