ಉಡುಪಿ | ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

Date:

Advertisements

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಜನವಿರೋಧ ನೀತಿಗಳನ್ನು ವಿರೋಧಿಸಿ ಜುನ್ 20ರಿಂದ ದೇಶಾದ್ಯಂತ ಜನಸಾಮಾನ್ಯರ ಮಧ್ಯೆ ಪ್ರಚಾರ, ಜನಜಾಗೃತಿ ಸಭೆ, ಪ್ರತಿಭಟನೆ ನಡೆಸಲು ಕರೆ ನೀಡಿದ್ದು ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಪ್ರಚಾರ ನಡೆಸುತ್ತಿದೆ. ಕೇಂದ್ರ ಸರಕಾರದ ಕಾರ್ಮಿಕ ಕಾನೂನು ತಿದ್ದುಪಡಿಯಿಂದಾಗಿ ಕಾರ್ಮಿಕರು ಸೌಲಭ್ಯ ಗಳಿಂದ ವಂಚಿತರಾಗುತ್ತಿದ್ದಾರೆ. ಬಡ ಕಾರ್ಮಿಕರು ಸ್ವಂತ ನಿವೇಶನ ಇಲ್ಲದೆ ಬಾಡಿಗೆ ಕಟ್ಟಲು ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ. ದಿನ ನಿತ್ಯ ಬೆಲೆ ಏರಿಕೆ ಯಿಂದಾಗಿ ಕಾರ್ಮಿಕರು ಎಷ್ಟು ದುಡಿದರು ಮಕ್ಕಳ ಶಿಕ್ಷಣ, ಆಹಾರ, ಆರೋಗ್ಯ ಬಗ್ಗೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ಕಡೆ ಕೇಂದ್ರ ಸರಕಾರವು ಸರಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರುತ್ತಿದ್ದರು ರೈಲ್ವೆ, ವಿದ್ಯುತ್, ಬಂದರುಗಳು, ವಿಮಾನ ನಿಲ್ದಾಣ ಗಳನ್ನು ಖಾಸಗೀಯವರಿಗೆ ಮಾರಟ ಮಾಡುತ್ತಿದ್ದಾರೆ. ಈ ಸರಕಾರದ ಧೋರಣೆಗಳನ್ನು ಜನಸಾಮಾನ್ಯರಿಗೆ ತಿಳಿಸಲು ಸಿಪಿಐಎಮ್ ಪಕ್ಷವು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್ .ಎಸ್. ಕಾಂಚನ್ ತಿಳಿಸಿದ್ದಾರೆ‌

ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಮ್) ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಉಡುಪಿಯ ಇಂದಿರನಗರ, ಕುಕ್ಕಿಕಟ್ಟೆ, ದೊಡ್ಡಣಗುಡ್ಡೆ, ಈಶ್ವರನಗರ, ಕೆಳಾರ್ಕಳಬೆಟ್ಟು, ಮೂಡಬೆಟ್ಟು, ಲಕ್ಷೀನಗರ ಗರಡೆ ಪ್ರದೇಶದಲ್ಲಿ ಪ್ರಚಾರ ನಡೆಸಲಾಯಿತು.

ಸ್ಥಳೀಯ ಪ್ರಮುಖ ಬೇಡಿಕೆ

  1. ಉಡುಪಿಯಲ್ಲಿ ಇ.ಎಸ್.ಐ. Dispensary ಔಷಧ ಗಳು ಸರಿಯಾಗಿ ಸಿಗುತ್ತಿಲ್ಲ. ಅದನ್ನು ಕೂಡಲೇ ಸರಿಪಡಿಸಬೇಕು. ಇದರಿಂದ ಕಾರ್ಮಿಕರಿಗೆ ತುಂಬಾ ಸಹಾಯವಾಗುತ್ತದೆ.
  2. ಗ್ರಾಮೀಣ ಭಾಗಗಳಲ್ಲಿ ರಸ್ತೆ, ಚರಂಡಿ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಕೆಲವು ಕಡೆ ಮಳೆ ನೀರು ಸರಿಯಾಗಿ ಹರಿಯಲು ಸಾಧ್ಯವಾಗದೆ ಗೋಡೆ ಕುಸಿತ, ಮಣ್ಣು ಕುಸಿತ ಸಂಭವಿಸುತ್ತಿದೆ.
  3. ಜನರ ಬಳಕೆಗೆ ಪೂರಕವಾಗಿ ಮುರುಡೇಶ್ವರ-ಬೆಂಗಳೂರು ಹಗಲು ರೈಲನ್ನು ರಾತ್ರಿ ಕೂಡ ಓಡಿಸಬೇಕು ಇದರಿಂದ ಸಾಮಾನ್ಯ ಜನರಿಗೆ ತುಂಬಾ ಅನುಕುಲವಾಗಲಿದೆ.

  4. ಈ ಎಲ್ಲಾ ಬೇಡಿಕೆಗಳನ್ನು ಇಟ್ಟು ತೆಂಕನಿಡಿಯೂರು ಪಂಚಾಯತ್ ಮೂಲಕ ಪ್ರಧಾನಮಂತ್ರಿ ಯವರಿಗೆ ಮನವಿಯನ್ನು ನೀಡಲಾಯಿತು.

ನಿಯೋಗದಲ್ಲಿ ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೊಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಉಮೇಶ್ ಕುಂದರ್, ಉಡುಪಿ ವಲಯ ಸಮಿತಿ ಸದಸ್ಯರಾದ ನಳಿನಿ. ಎಸ್, ಪಕ್ಷದ ಮುಖಂಡರಾದ ಶಾರದ, ಲಕ್ಷೀ, ಕಮಲ, ಲಕ್ಷೀ ಎಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Download Eedina App Android / iOS

X