ದಾವಣಗೆರೆ | ಮಾನವ ಬಂಧುತ್ವ ವೇದಿಕೆ, ಕಲಾ ಬಂಧುತ್ವ ವೇದಿಕೆ ಸಹಯೋಗದಲ್ಲಿ ಬೀದಿ ನಾಟಕ ಹಾಗೂ ಜನಪದ ಪ್ರದರ್ಶನ

Date:

Advertisements

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಕಲಾ ಬಂಧುತ್ವ ವೇದಿಕೆ ದಾವಣಗೆರೆಯ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ಉದ್ಘಾಟಿಸಲಾಯಿತು.

1002274919
ಜಯದೇವ ವೃತ್ತದಲ್ಲಿ ಉದ್ಘಾಟನೆ ವೇಳೆ ಕಲಾ ತಂಡಗಳ ಬೀದಿ ನಾಟಕ ಪ್ರದರ್ಶನ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಹಾಗೂ ಜನಪದ ಗೀತೆಗಳ ಕಾರ್ಯಕ್ರಮವನ್ನು ನಿವೃತ್ತ ಡಿವೈಎಸ್ಪಿ ರವಿ ನಾರಾಯಣ್ ಉದ್ಘಾಟಿಸಿ “ಕಲಾತಂಡಗಳು ಉತ್ತಮ ಪ್ರದರ್ಶನ ನೀಡಲಿ. ಇದರಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಉತ್ತಮ ಸಂದೇಶ ನೀಡಲು ಸಹಕಾರಿಯಾಗಲಿ” ಎಂದು ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು.

1002274920

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಸಂಘಟನೆಯು ರಾಜ್ಯಾದ್ಯಂತ ಬೀದಿ ನಾಟಕ ಮತ್ತು ಜನಪದ ಹಾಡುಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಕಲಾತಂಡಗಳು ತರಬೇತಿ ಪಡೆದು ಎಲ್ಲಾ ಜಿಲ್ಲೆಗಳಲ್ಲಿ ಪ್ರದರ್ಶನ ನೀಡಲಿರುವ ಅಂಗವಾಗಿ ಕಾರ್ಯಕ್ರಮದ ಉದ್ಘಾಟನೆಯನ್ನು ಮೊದಲಿಗೆ ದಾವಣಗೆರೆ ಜಿಲ್ಲೆಯಿಂದ ಪ್ರಾರಂಭಿಸಲಾಯಿತು.

1002274156

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ. ರಾಮಚಂದ್ರಪ್ಪ ಮಾತನಾಡಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿ ಜಿಲ್ಲೆಗೊಂದರಂತೆ ಜಿಲ್ಲೆಯ ಬೇರೆ ಭಾಗಗಳಲ್ಲಿ ಬೀದಿನಾಟಕ ಮತ್ತು ಜನಪದ ಗೀತೆಗಳ ಕಲಾಪ್ರದರ್ಶನ ನೀಡಲು ಕಲಾ ಬಂಧುತ್ವ ವೇದಿಕೆಯ ಆಶ್ರಯದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದ್ದು ಹಲವಾರು ಕಲಾತಂಡಗಳನ್ನು ರಚಿಸಿ ತರಬೇತಿ ನೀಡಲಾಗಿದೆ. ಈ ಕಲಾತಂಡಗಳು ರಾಜ್ಯದ ಬೇರೆಬೇರೆ ಜಿಲ್ಲೆಗಳಲ್ಲಿ ಪ್ರದರ್ಶನ ನೀಡಲಿವೆ. ಇದರ ಅಂಗವಾಗಿ ಮೊದಲಿಗೆ ದಾವಣಗೆರೆಯಿಂದಲೇ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾರಂಭಿಸಲಾಗಿದೆ” ಎಂದು ಮಾಹಿತಿ ನೀಡಿದರು.

1002274228

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಬುದ್ಧ ಪ್ರಜ್ಞೆ, ಕರುಣೆ; ಪ್ರೊ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ದು ಸರಸ್ವತಿ

ಉದ್ಘಾಟನಾ ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಮುನಿಯಪ್ಪ, ರುದ್ರಮುನಿ ಆವರಗೆರೆ, ಪ್ರಾಂಶುಪಾಲ ಪ್ರೊ. ಮಂಜಪ್ಪ, ನಿರ್ದೇಶಕ ಅಂಜಿನಪ್ಪ ಲೋಕಿಕೆರೆ, ವಕೀಲ ಅನೀಶ್ ಪಾಷಾ, ಹರೋಸಾಗರ ಸಿದ್ದರಾಮಣ್ಣ, ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು, ಆದಿಲ್ ಖಾನ್, ಮಾನವ ಬಂಧುತ್ವ ವೇದಿಕೆಯ ಶಿವಕುಮಾರ್ ಮಾಡಾಳ್, ಹನುಮಂತಪ್ಪ, ಮತ್ತು ಕಲಾತಂಡಗಳ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X