ಚಾಮರಾಜನಗರ | ಕಾಡು ಪ್ರಾಣಿ ಹಾವಳಿ, ಬೆಳೆ ಪರಿಹಾರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವ ಕೆ ವೆಂಕಟೇಶ್

Date:

Advertisements

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ, ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ‘ ಕಾಡು ಪ್ರಾಣಿಗಳ ಹಾವಳಿ ಸಂಬಂಧ ಜನರಿಂದ ಬರುವ ದೂರುಗಳು, ಬೆಳೆ ಹಾನಿ ಪರಿಹಾರದಂತಹ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕೆಂದು ‘ ಸೂಚನೆ ನೀಡಿದರು.

” ಅರಣ್ಯ ಇಲಾಖೆ ಸಂಬಂಧ ಸಾರ್ವಜನಿಕರಿಂದ ಹೆಚ್ಚು ದೂರುಗಳು ಬರುತ್ತಿವೆ. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರಿಂದ ಅರಣ್ಯ ಇಲಾಖೆಗೆ ಮಾಹಿತಿ ಬರುತ್ತಿದೆ. ಇಂತಹ ಸಂದರ್ಭಗಳಲ್ಲಿ ನಿರ್ಲಕ್ಷ್ಯ ವಹಿಸದೇ ಅರಣ್ಯ ಅಧಿಕಾರಿಗಳು ಕೂಡಲೇ ಧಾವಿಸಬೇಕು. ಕಾಡು ಪ್ರಾಣಿಗಳಿಂದ ನಾಶವಾಗುವ ಬೆಳೆಗೆ ಪರಿಹಾರ ನೀಡಲು ಶೀಘ್ರ ಕ್ರಮ ವಹಿಸಬೇಕು.
ರೈತ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸಲು ಹಾಗೂ ಸಮಸ್ಯೆ ಪರಿಹರಿಸುವ ಸಂಬಂಧ ಸಲ್ಲಿಸಲಾಗಿರುವ ಮನವಿ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿ ಬಾಳೆ ಬೆಳೆಗಾರರಿಗೆ ಯಾವುದೇ ತಾರತಮ್ಯವಾಗದಂತೆ ಉತ್ತಮ ದರ ಸಿಗಬೇಕು. ಈ ನಿಟ್ಟಿನಲ್ಲಿ ಎಪಿಎಂಸಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆ ಕರೆದು ಸಮಸ್ಯೆ ಇತ್ಯರ್ಥ ಮಾಡಬೇಕೆಂದು ” ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಸೇವೆ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕವಾಗಿ ಇರಬೇಕು. ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಬಸ್ಸುಗಳ ನಿಯೋಜನೆಯಾಗಬೇಕು. ಈ ಸಂಬಂಧ ಸಭೆ ಕರೆದು ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಮುಂದಾಗಬೇಕು. ಹೋಟೆಲ್, ಬೇಕರಿ, ರೆಸ್ಟೋರೆಂಟ್ ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದೆ ಇರುವ ಬಗ್ಗೆ ದೂರು ಬಂದಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಾಪಕ ಭೇಟಿ ನೀಡಿ ಪರಿಶೀಲಿಸಬೇಕು. ಶುದ್ದತೆ, ನೈರ್ಮಲ್ಯ ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದರು.

ಆರೋಗ್ಯ ಇಲಾಖೆ ಪರಿಶೀಲನೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಆರೋಗ್ಯ ಸೇವೆ ಎಲ್ಲ ಜನರಿಗೂ ಉತ್ತಮವಾಗಿ ತಲುಪಬೇಕು. ಹಾಡಿಗಳಿಗೆ ವೈದ್ಯರ ತಂಡವೇ ಭೇಟಿ ನೀಡಿ ಆರೋಗ್ಯ ತಪಾಸಣೆ, ಚಿಕಿತ್ಸೆಯಂತಹ ಔಷದೋಪಾಚಾರಗಳನ್ನು ಮಾಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎಂ. ವಿ. ವೆಂಕಟೇಶ್ ಮಾತನಾಡಿ ಆಸ್ಪತ್ರೆಗಳಲ್ಲೇ ಸುರಕ್ಷಿತವಾಗಿ ಹೆರಿಗೆ ಆದರೆ ತಾಯಿ ಮಗು ಆರೋಗ್ಯವಾಗಿರುತ್ತಾರೆ. ಮನೆಗಳಲ್ಲಿ ಹೆರಿಗೆ ಪ್ರಕರಣಗಳು ಆಗದಂತೆ ಮನವೊಲಿಸಬೇಕು. ತಾಯಿ ಮಕ್ಕಳ ಶಿಶು ಮರಣ ಸಂಖ್ಯೆ ತಗ್ಗಬೇಕು ಎಂದರು.

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ವೇಳೆ ವಿಧಾನ ಪರಿಷತ್ ಸದಸ್ಯರಾದ ಕೆ. ವಿವೇಕಾನಂದ ಮಾತನಾಡಿ ಶಿಕ್ಷಕರ ಕೊರತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪೂರ್ಣ ಮಾಹಿತಿ ಒದಗಿಸಬೇಕು. ಈ ಸಂಬಂಧ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಹಾಯಕವಾಗುತ್ತದೆ. ಶಾಲಾ ನಿರ್ಮಾಣಕ್ಕೆ ದಾನ ನೀಡಿರುವ ನಿವೇಶನ, ಕಟ್ಟಡ, ಇನ್ನಿತರ ವಿವರಗಳನ್ನು ಒದಗಿಸಬೇಕು ಎಂದರು.

ಶಾಸಕರಾದ ಎ. ಆರ್. ಕೃಷ್ಣಮೂರ್ತಿ ಮಾತನಾಡಿ ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ತಪ್ಪು ತಪ್ಪೇ. ಈ ವಿಷಯದಲ್ಲಿ ಸ್ಪಷ್ಟನೆ ನೀಡಬೇಕು ಎಂದರು.

ಕುಡಿಯುವ ನೀರಿನ ವ್ಯವಸ್ಥೆ ಪರಾಮರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವ ಗ್ರಾಮಗಳಲ್ಲಿ ಖಾಯಂ ನೀರು ವ್ಯವಸ್ಥೆ ಕಾಮಗಾರಿಯನ್ನು ಕೈಗೊಳ್ಳಬೇಕು. ನೀರು ಕೊರತೆಯಿರುವ ಗ್ರಾಮದ ಅಕ್ಕಪಕ್ಕದ ಸ್ಥಳಗಳಲ್ಲಿ ಬೋರ್ ವೆಲ್ ಕೊರೆಯಿಸಿ ಪೈಪ್ ಲೈನ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರಿನ ಸಮಸ್ಯೆ ತಕ್ಷಣವೇ ಬಗೆಹರಿಸಬೇಕು ಎಂದು ಸೂಚನೆ ನೀಡಿದರು.

ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಅರಣ್ಯ ಇಲಾಖೆ ವನ್ಯಜೀವಿಗಳಿಗೆ ನೀರು ಲಭ್ಯವಾಗುವಂತಹ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನರೇಗಾ ಅಡಿ ನೀರು ಪೂರೈಸುವ ಸಂಬಂಧ ಕೆಲಸಗಳನ್ನು ಕೈಗೊಂಡು ಉಪಯುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಶಾಸಕರಾದ ಎಂ. ಆರ್. ಮಂಜುನಾಥ್ ಮಾತನಾಡಿ ಜೆ.ಜೆ.ಎಂ ಕುಡಿಯುವ ನೀರಿನ ಕಾಮಗಾರಿಗಳು ತಡವಾಗಿ ಆಗುತ್ತಿದೆ. ಕೆಲವೆಡೆ ಇನ್ನೂ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಯಾವ ವೇಳೆಗೆ ನೀರಿನ ಕಾಮಗಾರಿ ಪೂರ್ಣಗೊಳ್ಳುತ್ತವೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದೇಶದ ಆಹಾರ ಕ್ಷೇತ್ರ ಸ್ವಾವಲಂಬನೆಗೆ ಬಾಬೂಜೀಯವರ ಕೊಡುಗೆ ಅಪಾರ : ಎಚ್ ವಿ ಚಂದ್ರು

ಶಾಸಕರಾದ ಹೆಚ್. ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅದ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಅಧಿಕಾರೇತರ ಕೆಡಿಪಿ ಸದಸ್ಯ ಸಯ್ಯದ್ ಮುಸೈಯೀಬ್, ಎಂ. ಶಂಕರಪ್ಪ, ಕ.ರಾ.ಸ.ಕೃ ಮತ್ತು ಗ್ರಾ.ಅ ಬ್ಯಾಂಕ್ ಮೈಸೂರಿನ ನಿರ್ದೇಶಕ ಎಂ. ಮಹದೇವಣ್ಣ ಸೇರಿದಂತೆ ಇನ್ನಿತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X