ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಭಾನುವಾರ ಪ್ರಮೋದ್ ಮುತಾಲಿಕ್ ನಿವೃತ್ತಿ ಘೋಷಿಸಿದರು.
ಶ್ರೀರಾಮಸೇನೆಯ ರಾಜ್ಯಾಧ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ತೆರುವಾದ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಪ್ರಮೋದ್ ಮುತಾಲಿ ಘೋಷಣೆ ಮಾಡಿದ್ದಾರೆ.
“ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿತ್ತೋ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಹಿನಾಯವಾಗಿ ಸೋಲು ಅನುಭವಿಸಿದಾಗ ಬಿಜೆಪಿಗೆ ಕಾರ್ಯಕರ್ತರು ಮತ್ತು ಹಿಂದುತ್ವದ ಬೆಲೆ ಗೊತ್ತಾಗಿದೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರು ವಿಡಿಯೋ ಮಾಡುತ್ತಿದ್ದಾರೆ. ಅದು ಮಕ್ಕಳ ಆಟ ಎಂದು ಗೃಹ ಸಚಿವರು ಹೇಳುತ್ತಿದ್ದಾರೆ. ಒಂದು ವೇಳೆ ಹಿಂದೂಗಳ ಮೇಲೆ ಆಗುತ್ತಿರುವ ಅನ್ಯಾಯ ಮಕ್ಕಳಾಟ ಆಗಿದ್ರೆ. ಇಂದಿರಾ ಗಾಂಧಿಯನ್ನು ಕೊಲೆ ಮಾಡಿದ್ದು ಕೂಡ ಮಕ್ಕಳಾಟ ಎನ್ನಬಹುದಲ್ವೇ ಎಂದು” ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿದ್ಧಲಿಂಗ ಸ್ವಾಮಿ ಪ್ರಶ್ನಿಸಿದ್ದಾರೆ.