ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೀದರ್ ತಾಲೂಕಿನ ಬರಿದಾಬಾದ್ ಗ್ರಾಮದಲ್ಲಿ ಸಂಭವಿಸಿದೆ.
ವಾಂತಿ – ಭೇದಿಯಿಂದ ಅಸ್ವಸ್ಥರಾಗಿ ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆ ಮತ್ತು ವಾಸು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದು, ವೈದ್ಯರ ಕೊರತೆ ಇದ್ದರೆ ಬೇರೆ ಕಡೆಯಿಂದ ಕರೆಸಿ ಚಿಕಿತ್ಸೆ ಕೊಡಿಸುವಂತೆ ಡಿಎಚ್‌ಒಗೆ ಸೂಚಿಸಿದರು.
“ಅಸ್ವಸ್ಥರಾದ ಕೆಲವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಕುಡಿಯುವ ನೀರಿನ ಪೈಪ್ ಸೋರಿಕೆ ಕಾರಣ ನೀರು ಕಲುಷಿತಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಮಾಹಿತಿ ಲಭ್ಯವಾಗಿದೆ. ವಿಶೇಷ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುವುದು” ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ರತಿಕಾಂತ ಸ್ವಾಮಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ವಾರದ ಬಳಿಕ ಪತ್ತೆ
ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ, ಡಿ ಸಿ ಗೋವಿಂದ ರೆಡ್ಡಿ, ಎಸ್‌ಪಿ ಚನ್ನಬಸವಣ್ಣ ಲಂಗೋಟಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.