ಪಡಿತರ ಸಾಗಣೆ ವೆಚ್ಚ | ಪಾವತಿ ಮಾಡಬೇಕಿದ್ದ ಹಣ ಬಿಡುಗಡೆ ಮಾಡಿ ಸರ್ಕಾರ ಆದೇಶ

Date:

Advertisements

ಅನ್ನಭಾಗ್ಯ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್‌ಎಫ್‌ಎಸ್‌ಎ) ಯೋಜನೆಗಳ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಧಾನ್ಯ ಸಾಗಣೆ ವೆಚ್ಚದ ಬಿಲ್ ಐದು ತಿಂಗಳಿನಿಂದ ಪಾವತಿ ಮಾಡದೇ ಇರುವುದನ್ನು ಖಂಡಿಸಿ, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಸಂಘವು ಆಹಾರಧಾನ್ಯ ಪೂರೈಕೆಯನ್ನು ಸೋಮವಾರದಿಂದ ಸ್ಥಗಿತಗೊಳಿಸಿತ್ತು.

ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಫೆಬ್ರವರಿ, ಮಾರ್ಚ್, ಏಪ್ರೀಲ್ ಹಾಗೂ ಮೇ-2025ರ ಮಾಹೆಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗಾಗಿ ಮತ್ತು ಇತರ ಪ್ರಾಸಂಗಿಕ ಶುಲ್ಕಗಳಾದ ಸಗಟು ಮತ್ತು ಚಿಲ್ಲರೆ ಲಾಭಾಂಶ, ಸಾಗಾಣಿಕೆ ಶುಲ್ಕಗಳಿಗೆ ಉಂಟಾಗುವ ವೆಚ್ಚವನ್ನು ಭರಿಸಲು 2082.99ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಫೆಬ್ರುವರಿಯಿಂದ ಜೂನ್‌ವರೆಗೆ ‘ಅನ್ನಭಾಗ್ಯ ಯೋಜನೆ’ ಹಾಗೂ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಎನ್‌ಎಫ್‌ಎಸ್ಎ ಯೋಜನೆಯಡಿಯಲ್ಲಿ ಆಹಾರ ಧಾನ್ಯ ಸಾಗಣೆಗೆ ಮಾಡಿರುವ ವೆಚ್ಚವನ್ನು ಸರ್ಕಾರ ಪಾವತಿ ಮಾಡಿಲ್ಲ. ಹೀಗಾದರೆ ಗುತ್ತಿಗೆ ಪಡೆದಿರುವ ಲಾರಿ ಮಾಲೀಕರು ಬದುಕುವುದು ಹೇಗೆ” ಎಂದು ಸಂಘದ ಅಧ್ಯಕ್ಷ ಜಿ.ಆ‌ರ್. ಷಣ್ಮುಗಪ್ಪ ಪ್ರಶ್ನಿಸಿದ್ದರು.

ಆದೇಶ 8
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X