ಮಂಗಳೂರು | ನಾವೆಲ್ಲರೂ ಒಂದೇ ಎನ್ನುವ ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್ ಇಸ್ಮಾಯಿಲ್

Date:

Advertisements

ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಎನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಾಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ “ಜಾಗರ್ತೆ” ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.

“ನಾವು ಕತ್ತರಿಸುವ ಕತ್ತರಿ ಆಗಬಾರದು. ಹೊಲಿದು ಒಟ್ಟುಗೂಡಿಸುವ ಸೂಜಿ ದಾರ ಆಗಬೇಕು. ನಮ್ಮ ಜಾತಿ ಧರ್ಮ ಮನೆಯಲ್ಲಿ ಮತ್ತು ಆರಾಧನಾಲಯಗಳಲ್ಲಿ ಮಾತ್ರ ಇರಬೇಕೇ ಹೊರತು ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಇರಬೇಕು. ಧರ್ಮ, ಜಾತಿ ಭಾಷೆ ಯಾವುದೇ ಇರಲಿ ಮನುಷ್ಯರು ಒಂದೇ. ಅದನ್ನು ಸಾರುವ ಪ್ರಯತ್ನವನ್ನು ತುಳು ಅಕಾಡೆಮಿ ಈ ನಾಟಕದ ಮೂಲಕ ಮಾಡುತ್ತಿದೆ” ಎಂದರು.

Advertisements

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳುನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ವಿದ್ಯಾರ್ಥಿ ಯುವಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತುಳು ಅಕಾಡೆಮಿಯು ಎರಡು ಹೊಸ ನಾಟಕಗಳನ್ನು ನಿರ್ಮಾಣ ಮಾಡಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

ನಾಟಕ ಹಾಗೂ ಚಲನಚಿತ್ರ ನಟಿ ಸುನೀತಾ ಎಕ್ಕೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಂಗ ಸಂಚಲನ ನಿರ್ದೇಶಕ ದಿನೇಶ್ ಅತ್ತಾವರ, ಅಕಾಡೆಮಿ ಸದಸ್ಯರಾದ ಬೂಬ ಪೂಜಾರಿ, ಕುಂಬ್ರ ದುರ್ಗಾಪ್ರಸಾದ್ ರೈ, ಮಿಲಾಗ್ರಿಸ್ ಪ್ರೌಢಶಾಲೆಯ ಪ್ರಾಂಶುಪಾಲ ಫಾ.ಉದಯ್ ಫೆರ್ನಾಂಡಿಸ್ ಸೇರಿದಂತೆ ಇತರರು ಇದ್ದರು.

ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ನಿರೂಪಿಸಿದರು. ಮಿಲಾಗ್ರಿಸ್ ಪಿಯು ಕಾಲೇಜ್ ಪ್ರಾಂಶುಪಾಲ ಮೇಲ್ವಿನ್ ವಾಸ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X