ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗೆ ಒತ್ತಾಯಿಸಿ ; ಜೂ. 21 ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

Date:

Advertisements

ರಾಯಚೂರು ತಾಲ್ಲೂಕಿನಲ್ಲಿ ಒಳಗೊಂಡ ಯರಗೇರಾ ಗ್ರಾಮವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಜು.21 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟ ನಡೆಸಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಹೋರಾಟ ಸಮಿತಿ ಪ್ರಧಾನ ಸಂಚಾಲಕ ಮಹ್ಮದ ನಿಜಾಮುದ್ದೀನ್ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಯರಗೇರಾ ತಾಲ್ಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆ ಪಡೆದಿದೆ. ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಸೇರಿದಂತೆ ನೂರಾರು ಎಕರೆ ಸರ್ಕಾರಿ ಜಮೀನು ಲಭ್ಯವಿದೆ. 19 ಗ್ರಾಮಪಂಚಾಯತಿಗಳು, 78 ಗ್ರಾಮಗಳನ್ನು ಒಳಗೊಂಡು ಹೆದ್ದಾರಿ ರಸ್ತೆಯಲ್ಲಿದ್ದು ನೂರಾರು ಗ್ರಾಮಸ್ಥರಿಗೆ ತಾಲ್ಲೂಕು ಕೇಂದ್ರವಾದರೆ ಅನುಕೂಲವಾಗುತ್ತದೆ. 2020 ರಿಂದ ತಾಲ್ಲೂಕು ಕೇಂದ್ರವನ್ನಾಗಿಸಲು ನಿರಂತರ ಹೋರಾಟ ನಡೆಸಿಕೊಂಡು ಬರಲಾಗಿದೆ. ಇತ್ತೀಚಿಗೆ ಯರಗೇರಾ ಗ್ರಾಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳಿಗೆ ಮನವಿ ಸಲ್ಲಿಸಿದರು ಸರ್ಕಾರದಿಂದ ಯಾವುದೇ ಸ್ಪಂದನೆ ಬಾರದೇ ಇರುವರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಗಿಲ್ಲೆಸೂಗೂರು, ಯರಗೇರಾ, ಕಲ್ಮಲಾ ಹೋಬಳಿ ವಿವಿಧ ಗ್ರಾಮಸ್ಥರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. 22 ಕ್ರಷರ್‌ಗಳು, 15 ಹೆಚ್ಚು ಕಾರುಗಳ ಮೂಲಕ ಪಕ್ಷಾತೀತವಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ಹಂತದಲ್ಲಿ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಹಾಗೂ ಸಂಸದರ ಮನೆ, ಕಚೇರಿಗಳ ಮುಂದೆ ಅನಿರ್ದಿಷ್ಟ ಧರಣಿ ನಡೆಸಲಾಗುತ್ತದೆ. ಸರ್ಕಾರ ಸ್ಪಂದನೆ ನೀಡದೇ ಹೋದಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನರೇಗಾ ಕಾಮಗಾರಿ ವೇಳೆ ಮಹಿಳೆಗೆ ಹಾವು ಕಡಿತ ; ಆಸ್ಪತ್ರೆಗೆ ದಾಖಲು

ಈ ಸಂದರ್ಭದಲ್ಲಿ ಬಸವರಾಜ ಹೂಗಾರ, ವಿದ್ಯಾನಂದರೆಡ್ಡಿ, ಮಹಿಭೂಬಪಟೇಲ್, ತಾಯಪ್ಪ ನಾಯಕ, ಮಹ್ಮದ ರಫಿ ಸೇರಿ ಅನೇಕರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X