ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ಭೋಯರ್ ಹರ್ಷಲ್ ಅವರು 2016ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಚಾಮರಾಜನಗರ, ವಿಜಯನಗರ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಯಾಗಿದ್ದಾರೆ.
ಡಾ.ಸುಶೀಲಾ ಬಿ. ಅವರು 2015ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಗದಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸೇವೆ ಸಲ್ಲಿಸಿದ್ದರು. 2023ರಿಂದ ಯಾದಗಿರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ : ಡಾ. ಬಿ.ಆರ್. ಅಂಬೇಡ್ಕರ್ ಪೀಪಲ್ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ದೇಕೆ?