ದಾವಣಗೆರೆ | ಮಹಾನಗರ ಪಾಲಿಕೆ ನೌಕರ ಮುಷ್ಕರ; ದಾವಣಗೆರೆಯಲ್ಲಿ ಸೇವೆಗಳ‌ ವ್ಯತ್ಯಯದಿಂದ ಜನರ ಪರದಾಟ

Date:

Advertisements

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ನೇತೃತ್ವದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೇವೆ ಸ್ಥಗಿತಗೊಳಿಸಿ ಜು.8ರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಅರ್ನಿಷ್ಟಾವದಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ದಾವಣಗೆರೆ ಮಹಾನಗರ ಪಾಲಿಕೆಯ ಮೂರು ವಲಯ ಕಛೇರಿಗಳೂ ಸೇರಿದಂತೆ ಪಾಲಿಕೆಯ ನೌಕರರು ಸೇವೆಗೆ ಹಾಜರಾಗದೆ ಪ್ರತಿಭಟನೆ ನಡೆಸಿದರು. ಇದರಿಂದ ದಾವಣಗೆರೆಯಲ್ಲಿ ಜನರ ಪರದಾಟ ಕಂಡುಬಂದಿತು.‌

ದಾವಣಗೆರೆಯ 800 ನೌಕರರು ಸೇರಿ ರಾಜ್ಯದ 10 ಪಾಲಿಕೆಗಳ 15 ಸಾವಿರಕ್ಕೂ ಹೆಚ್ಚು ನೌಕರರು
ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ನಗರಗಳ ಪೌರಾಡಳಿತ ಸೇವೆಯಿಲ್ಲದೇ ಜನ ಅನಾನುಕೂಲ ಅನುಭವಿಸುವಂತಾಗಿದೆ.

ಪಾಲಿಕೆ ನೌಕರರ ಮುಷ್ಕರಕ್ಕೆ ಪೌರಕಾರ್ಮಿಕರು ಸಹ ಬೆಂಬಲ ವ್ಯಕ್ತಪಡಿಸಿದ್ದು, ಸೇವೆ ಸ್ಥಗಿತಗೊಳಿಸಿ ಬೆಂಬಲ ವ್ಯಕ್ತಪಡಿಸಲಿರುವ ಕಾರಣ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತೆಯ ಕಾರ್ಯವೂ ಕೂಡ ಬಂದ್ ಆಗಿದೆ. ಸಾರ್ವಜನಿಕರ ದೈನಂದಿನ ಪಾಲಿಕೆ ವ್ಯವಹಾರ, ನೀರು ಸರಬರಾಜು ಸೇರಿದಂತೆ ಹಲವು ಸೇವೆಗಳಲ್ಲಿ ಕೂಡ ವ್ಯತ್ಯಯ ಉಂಟಾಗಲಿದೆ.‌

Advertisements

“7 ನೇ ವೇತನ ಆಯೋಗದ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೆ ಯಥಾವತ್ತಾಗಿ ವಿಸ್ತರಿಸಿ, ಸರ್ಕಾರದ ಆರ್ಥಿಕ ಇಲಾಖೆಯಿಂದಲೇ ರಾಜ್ಯ ಹಣಕಾಸು ಆಯೋಗ ನೀಡುವ ವೇತನದ ಅನುದಾನದಿಂದಲೇ ಶೇಕಡ 100 ರಷ್ಟು ಅನುದಾನವನ್ನು ಬಿಡುಗಡೆ ಮಾಡಬೇಕು. ಕರ್ನಾಟಕ ಮಹಾನಗರ ಪಾಲಿಕೆಗಳು (ಅಧಿಕಾರಿಗಳು ಮತ್ತು ಸಿಬ್ಬಂದಿಗಳ) ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡಿ ಶೀಘ್ರವಾಗಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು”

“ಕೆ.ಜಿ.ಐ.ಡಿ, ಜಿ.ಐ.ಎಸ್ (ಗ್ರೂಪ್ ಇನ್ಸೂರೆನ್ಸ್) ಹಾಗೂ ಜಿ.ಪಿ.ಎಫ್ ಸೌಲಭ್ಯ ಮತ್ತು ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನೌಕರರಿಗೆ ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರಿಗೆ ವಿವಿಧ ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಆಹ್ವಾನ

“ರಾಜ್ಯದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕೆ.ಎಂ.ಸಿ ಆಕ್ಟ್ 1976 ಸೆಕ್ಷನ್ 83 ರಂತೆ ಹಾಗೂ ಕೆ.ಎಂ.ಎ.ಎಸ್ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಕೆ.ಎಂ.ಎ.ಎಸ್ ಹುದ್ದೆಗೆ ಮುಂಬಡ್ತಿ ನೀಡಲು ಅವಕಾಶವಿದ್ದರೂ ಸಹ ಕಳೆದ 50 ವರ್ಷಗಳಿಂದಲೂ ಕೆ.ಎಂ.ವಿ.ಎಸ್ ಹುದ್ದೆಗಳಿಗೆ ಮುಂಬಡ್ತಿ ನೀಡಿರುವುದಿಲ್ಲ. ಈ ಸಂಬಂಧ ರಾಜ್ಯ ಉಚ್ಚನ್ಯಾಯಾಲಯವು ತೀರ್ಪು ನೀಡಲಾಗಿದ್ದರೂ ಸಹ 2022 ರ ಕೆ.ಎಂ.ಎ.ಎಸ್ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾರತಮ್ಯ ಉಂಟುಮಾಡಿರುವುದನ್ನು ಸರಿಪಡಿಸಬೇಕು” ಎನ್ನುವ ಬೇಡಿಕೆಗಳೊಂದಿಗೆ ಒತ್ತಾಯಿಸಿ ರಾಜ್ಯದ ಹತ್ತು ಮಹಾನಗರ ಪಾಲಿಕೆಯ ನೌಕರರು ಮುಷ್ಕರ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X