ಪಾಕಿಸ್ತಾನ | ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್‌ ಸ್ಫೋಟ; 40 ಸಾವು

Date:

Advertisements

ರಾಜಕೀಯ ಪಕ್ಷವೊಂದರ ಸಭೆಯಲ್ಲಿ ಬಾಂಬ್ ಸ್ಫೋಟಗೊಂಡು 40 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

ಬಜೌರ್‌ನ ಖಾರ್‌ನಲ್ಲಿ ಮೌಲಾನಾ ಫಜ್ಲುರ್ ರೆಹಮಾನ್ ಅವರ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿದ್ದು, ಪಕ್ಷದ ಹಿರಿಯ ನಾಯಕನ ಆಗಮನಕ್ಕೂ ಮುನ್ನ ಸ್ಫೋಟ ಸಂಭವಿಸಿದೆ ಎಂದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಗಂದಾಪುರ್ ಹೇಳಿದ್ದಾರೆ.

Advertisements

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸ್ಫೋಟದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಪಕ್ಷದ ಸ್ಥಳೀಯ ನಾಯಕ ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಬೈ | ಐಐಟಿ ಸಂಸ್ಥೆಯ ಕ್ಯಾಂಟೀನ್‌ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್

ಮೌಲಾನಾ ಫಜ್ಲುರ್ ರೆಹಮಾನ್ ಅವರನ್ನು ತಾಲಿಬಾನ್ ಪರ ಧರ್ಮಗುರು ಎಂದು ಪರಿಗಣಿಸಲಾಗಿದೆ. ಅವರ ರಾಜಕೀಯ ಪಕ್ಷವು ಇಸ್ಲಾಮಾಬಾದ್‌ನಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿದೆ. ಅಕ್ಟೋಬರ್ ವೇಳೆಗೆ ನಡೆಯಲಿರುವ ಚುನಾವಣೆಗೆ ಬೆಂಬಲಿಗರನ್ನು ಸಜ್ಜುಗೊಳಿಸಲು ದೇಶಾದ್ಯಂತ ಸಭೆಗಳನ್ನು ಆಯೋಜಿಸಲಾಗಿದೆ.

ಸೇನೆ ಹಾಗೂ ಕಾನೂನು ಜಾರಿ ಸಂಸ್ಥೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X