ಸಮಾಜದ ಎಲ್ಲಾ ವರ್ಗದ ಸರಕಾರಿ ಇಲಾಖೆಯಲ್ಲಿಯೂ ನಮ್ಮ ಪ್ರಿಯದರ್ಶಿನಿ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇರುವಂತೆ ಮಾಡುವುದೇ ನಮ್ಮ ಶಿಕ್ಷಣ ಸಂಸ್ಥೆಯ ಸಾರ್ಥಕ ಕನಸಾಗಿದೆ ಎಂದು ಸಾರಂಗ ಆಕಾಡೆಮಿ ಕಾರ್ಯದರ್ಶಿ ಅಜಯ್‌ಕುಮಾರ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಜೆ.ಸಮುದಾಯ ಭವನದಲ್ಲಿ ಮಂಗಳವಾರ ಸಾರಂಗ ಆಕಾಡೆಮಿಯ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ಸಾರಂಗ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪೋಷಕರ ಮನವಿಯಂತೆ ೨ 2026-27ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಪ್ರಿಯದರ್ಶಿನಿ ಕಾಲೇಜಿನಲ್ಲಿ ವಸತಿ ಸೌಲಭ್ಯ ನೀಡುವ ಯೋಜನೆ ರೂಪಿಸಲಾಗಿದೆ.
ಬೋರ್ಡ್ ಫಲಿತಾಂಶ ಅಷ್ಟೇ ಅಲ್ಲದೇ ಸಿಇಟಿ, ನೀಟ್ ಮತ್ತು ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಮುಖ ಆದ್ಯತೆ ಇರಲಿದೆ, ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿ ನಿಜವಾದ ಸ್ನೇಹಿತ ಪುಸ್ತಕವೇ ಆಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ರುದ್ರೇಶ್.ಕೆ.ಎನ್ ಮಾತನಾಡಿ, ಬಡಮಕ್ಕಳ ಶೈಕ್ಷಣಿಕ ಸಾಧನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಹಾರಾಡುವ ಪಕ್ಷಿಗಳಿಗೆ ರೆಕ್ಕೆಗಳೇ ಶಕ್ತಿ ಅದೇ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳೇ ಅಸ್ತ್ರ ಪ್ರಿಯದರ್ಶಿನಿ ಪಿಯು ಕಾಲೇಜಿನ ಮಕ್ಕಳು ರಾಜ್ಯದ ಟಾಪರ್ ಪಟ್ಟಿಯಲ್ಲಿ ಬರುವಂತೆ ಮಾಡುವುದೇ ನಮ್ಮೆಲ್ಲರ ಪ್ರಮುಖ ಕನಸು ಎಂದು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮ:
ಕೊರಟಗೆರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಚಾಪು ಮೂಡಿಸಿದ ಹೆಸರಾಂತ ಪ್ರಿಯದರ್ಶಿನಿ ಪಿಯು ಕಾಲೇಜಿನ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ (2025-26) ನೇ ವರ್ಷದ ಶೈಕ್ಷಣಿಕ ವರ್ಷಕ್ಕೆ ಆತ್ಮೀಯವಾಗಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.
ಕಾಲೇಜು ವಿದ್ಯಾರ್ಥಿಗಳಿಂದ ವರ್ಣರಂಜಿತ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆಯಲ್ಲಿ ವಿದ್ಯಾರ್ಥಿಗಳು ಎಲ್ಲರನ್ನೂ ಮನರಂಜಿಸಿದರು.
ಇದೇ ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಸಂಸ್ಥಾಪಕ ಅಧ್ಯಕ್ಷ ಪರಮ್ ಜಿತ್ ಮಿನಾಸ್, ವ್ಯವಸ್ಥಾಪಕ ರವಿಕುಮಾರ್, ಆಡಳಿತಾಧಿಕಾರಿ ಸ್ಮಿತಾ, ಜಸ್ಲಿನ್‌ಸಿಂಗ್ ಮಿನ್ಹಾಸ್, ಉಪನ್ಯಾಸಕರಾದ ಶ್ರೀನಿವಾಸ್.ಜಿ, ಕಾಂತರಾಜು, ಭರತ್, ಶ್ರೀಲಕ್ಮೀಶ್, ರಫತ್, ಲತಾ, ಹರೀಶ್, ಜ್ಯೋತಿ, ಗುಲ್ಲಬ್‌ಷಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.