ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

Date:

Advertisements

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ.

ಬಾಲಕಿ ನೀಡಿದ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ಮಾಡುತ್ತಿದ್ದ. ಬಂಧಿತರು ಸಂಘಪರಿವಾರದ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು 2019 ರಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್‌ ಎಂಬಾತ ಅತ್ಯಾಚಾರ ನಡೆಸಿದ್ದ.‌ ಕಳೆದ ಜನವರಿಯಲ್ಲಿ ಅಕ್ಷಯ್‌ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿದ್ದಾನೆ.

ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡುತ್ತಿದ್ದ. ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿರುತ್ತಾನೆ.

ಕಳೆದ ಜೂನ್‌ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಜನ-ದನಿ ಸಮಾವೇಶ | ಆ. 15ರ ಬಳಿಕ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕುಂದುಕೊರತೆ ಸಭೆ; ಶಾಸಕ ಭರವಸೆ

ಅಲ್ಲದೇ 2023ರ ಜುಲೈ 28ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದ. ಅಲ್ಲದೇ ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಎಲ್ಲ ಘಟನೆಗಳನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಕ್ಸೋ, ಅತ್ಯಾಚಾರ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X