ಸೌಜನ್ಯ ಪ್ರಕರಣ | ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

Date:

Advertisements

ಹೈಕೋರ್ಟ್‌ ನ್ಯಾಯಮೂರ್ತಿ ಆರ್ ದೇವದಾಸ್ ಅವರ ವಾಗ್ದಂಡನೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಧರ್ಮಸ್ಥಳ ದೇವಾಲಯದ ಮುಖ್ಯಸ್ಥ, ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಕ್ಕಾಗಿ ಮತ್ತು ಅವರ ವಿರುದ್ಧ ಆರೋಪಗಳನ್ನು ಮಾಡಿದ್ದಕ್ಕಾಗಿ ಹಿಂದುತ್ವವಾದಿ ಕಾರ್ಯಕರ್ತರೂ ಆಗಿರುವ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶ ದೇವದಾಸ್ ಅವರು 2025ರ ಜನವರಿ 20ರಂದು ಪೊಲೀಸರಿಗೆ ಆದೇಶಿಸಿದ್ದರು.

ಈ ಆದೇಶವು ಶಂಕಾಸ್ಪದವಾಗಿದೆ. ಈ ಆದೇಶದಿಂದಾಗಿ ರಾಜ್ಯದ್ಯಂತ ಆಯೋಜಿಸಲಾಗಿದ್ದ ನೂರಾರು ಪ್ರತಿಭಟನೆಗಳನ್ನು ಪೊಲೀಸರು ರದ್ದುಗೊಳಿಸಿದ್ದಾರೆ. ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದಾರೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದಲೇ ಈ ಆದೇಶ ಬಂದಿದೆ. ಆದೇಶ ನೀಡಿದ ನ್ಯಾಯಾಧೀಶ ದೇವದಾಸ್ ಅವರ ವಾಗ್ದಂಡನೆಯಾಗಬೇಕು. ಸೌಜನ್ಯ ಪ್ರಕರಣದ ವಿಚಾರಣೆಯಿಂದ ಅವರನ್ನು ವಜಾಗೊಳಿಸಬೇಕು ಎಂದು ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದ್ದಾರೆ

ಅಂದಹಾಗೆ, 2012ರಲ್ಲಿ ಧರ್ಮಸ್ಥಳದ ಬಳಿ ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಸೌರ್ಜನ್ಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪೊಲೀಸರು ಅಮಾಯಕ ಸಂತೋಷ್ ರಾವ್ ಅವರನ್ನು ಬಂಧಿಸಿದ್ದರು. ಆದರೆ, ಸೌಜನ್ಯ ಪ್ರಕರಣಕ್ಕೂ ಸಂತೋಷ್ ರಾವ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತು. ಸಂತೋಷ್ ರಾವ್ ಅವರನ್ನು 2023ರಲ್ಲಿ ಪ್ರಕರಣದಿಂದ ಖುಲಾಸೆಗೊಳಿಸಿತು.

ಅಲ್ಲದೆ, ಹಲವು ವರ್ಷಗಳಿಂದಲೂ ಧರ್ಮಸ್ಥಳದ ದೊಡ್ಡ ಗೌಡರ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂವರು ಸೌಜನ್ಯ ಪ್ರಕರಣದಲ್ಲಿ ನೈಜ ಆರೋಪಿಗಳು ಎಂದು ಸೌಜನ್ಯ ಕುಟುಂಬವು ವಾದಿಸಿದೆ.

ಸಂತೋಷ್ ರಾವ್ ಖುಲಾಸೆಯಾದ ಬಳಿಕ, ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕು. ನೈಜ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರಾವಳಿಯಾದ್ಯಂತ ಭಾರೀ ಪ್ರತಿಭಟನೆಗಳು ಭುಗಿಲೆದ್ದವು. ಈ ಪ್ರತಿಭಟನೆಗಳನ್ನು ಮಹೇಶ್ ಶೆಟ್ಟಿ ತಿಮರೋಡಿ ಮುನ್ನಡೆಸಿದ್ದರು.

ತಿಮರೋಡಿ ಅವರ ನೇತೃತ್ವದ ಪ್ರತಿಭಟನೆಗಳನ್ನು ಹತ್ತಿಕ್ಕಲು ಧರ್ಮಸ್ಥಳದ ದೊಡ್ಡ ಕುಟುಂಬವು ಯತ್ನಿಸಿತ್ತು. ಅದಕ್ಕಾಗಿ, ತಿಮರೋಡಿ ವಿರುದ್ಧ 2023ರಲ್ಲಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (SKDRDP) ಉದ್ಯೋಗಿ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಿಮರೋಡಿ ಅವರು ಈ ಹಿಂದೆ ಪ್ರತಿಭಟನೆಗಳನ್ನು ನಡೆಸದಂತೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ್ದಾರೆ. ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ವಿರುದ್ಧ ದೂರು ನೀಡಿದರೂ, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

ಆ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ದೇವದಾಸ್ ಅವರು 2025ರ ಜನವರಿಯಲ್ಲಿ ತಿಮರೋಡಿ ವಿರುದ್ಧ ಆದೇಶ ನೀಡಿದ್ದಾರೆ. “ವಾಕ್ ಸ್ವಾತಂತ್ರ್ಯವು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುವಂತಿರಬಾರದು. ಮಹೇಶ್ ಶೆಟ್ಟಿ ತಿಮ್ಮರೋಡಿ ಅಥವಾ ಅವರ ಬೆಂಗಲಿಗರು ಹೆಗಡೆ ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿದ್ದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದ್ದರೆ ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಹೇಳಿರುವ ನ್ಯಾಯಾಧೀಶರು ತಿಮರೋಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದರು.

ನ್ಯಾಯಾಧೀಶ ದೇವದಾಸ್ ಅವರು ನೀಡಿರುವ ಈ ತೀರ್ಪಿನ ವಿರುದ್ಧ ರವಿ ಕೃಷ್ಣ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. “ಸೌಜನ್ಯ ಪ್ರಕರಣದಲ್ಲಿ ಹೋರಾಟಗಾರರು ಮತ್ತು ಕಾರ್ಯಕರ್ತರು ಸಭೆ ನಡೆಸಲು, ಪ್ರತಿಭಟನೆಗಳನ್ನು ಮಾಡಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಅದರ ಅನುಸಾರ, ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು. ಆದರೆ, ನ್ಯಾಯಮೂರ್ತಿ ದೇವದಾಸ್ ಅವರು ನೀಡಿದ ತೀರ್ಪನ್ನು ಉಲ್ಲೇಖಿಸಿ ಪೊಲೀಸರು ಎಲ್ಲ ಪ್ರತಿಭಟನೆಗಳನ್ನು ರದ್ದುಗೊಳಿಸಿದ್ದಾರೆ. ಪ್ರತಿಭಟನೆ ನಡೆಸಿದರೆ, ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ರೆಡ್ಡಿ ಆರೋಪಿಸಿದ್ದಾರೆ.

ಕೆಳ ನ್ಯಾಯಾಲಯಗಳು, ವಿಶೇಷವಾಗಿ ಬೆಂಗಳೂರು ನಗರ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ನೀಡಿರುವ ತಾತ್ಕಾಲಿಕ ತಡೆಯಾಜ್ಞೆಗಳ ಕುರಿತು ಗಮನ ಸೆಳೆದಿರುವ ರವಿಕೃಷ್ಣ ರೆಡ್ಡಿ ಅವರು, “ಮಾರ್ಚ್ 21 ರಂದು ದಾಖಲಾಗಿದ್ದ ಪ್ರಕರಣವೊಂದರಲ್ಲಿ, ನ್ಯಾಯಾಧೀಶ ನಟರಾಜ್ ಅವರು ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ 1,588 ಯೂಟ್ಯೂಬ್ ವೀಡಿಯೊಗಳು, 645 ಇನ್‌ಸ್ಟಾಗ್ರಾಮ್ ವೀಡಿಯೊಗಳು ಮತ್ತು ಸ್ಲೈಡ್‌ಗಳು ಹಾಗೂ 633 ಫೇಸ್‌ಬುಕ್ ವೀಡಿಯೊಗಳು ಮತ್ತು ಸ್ಲೈಡ್‌ಗಳನ್ನು ತೆಗೆದುಹಾಕಲು ಆದೇಶ ಹೊರಡಿಸಿದ್ದಾರೆ. ಆದರೆ, 2,200ಕ್ಕೂ ಹೆಚ್ಚು ವಿಶಿಷ್ಟ URLಗಳನ್ನು 24 ಗಂಟೆಗಳ ಒಳಗೆ ಪರಿಶೀಲಿಸಿ ಅವುಗಳ ಮಾನನಷ್ಟಕರ ಸ್ವರೂಪವನ್ನು ಖಚಿತಪಡಿಸಿಕೊಳ್ಳುವುದು ತಾಂತ್ರಿಕವಾಗಿ ಅಸಾಧ್ಯ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?:ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಮೋದಿ ಮಸಲತ್ತು ಬಹಿರಂಗ?

ವೀರೇಂದ್ರ ಹೆಗ್ಗಡೆ ಪರವಾಗಿ ಕೆಲಸ ಮಾಡುತ್ತಿರುವ ಒಂದು ಗುಂಪಿನ ದಾವೆದಾರರು ಬಹು ರೀತಿಯ ಮೊಕದ್ದಮೆಗಳನ್ನು ದಾಖಲಿಸಿರುವುದು ಮತ್ತು ಅವೆಲ್ಲವನ್ನೂ ನ್ಯಾಯಾಧೀಶ ಎಸ್ ನಟರಾಜ್‌ ಅವರ ಪೀಠಕ್ಕೆ ನಿಗದಿ ಮಾಡುತ್ತಿರುವುದು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆಗಳ ನೋಂದಾವಣೆ ಕುರಿತು ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ರವಿಕೃಷ್ಣಾ ರಡ್ಡಿ ಹೇಳಿದ್ದಾರೆ.

“ಸೌಜನ್ಯ ಪ್ರಕರಣದಲ್ಲಿನ ತಡೆಯಾಜ್ಞೆಗಳು ಮತ್ತು ಆದೇಶಗಳಲ್ಲಿ ನ್ಯಾಯಾಧೀಶ ಎಸ್ ನಟರಾಜ್ ಮತ್ತು ರಿಜಿಸ್ಟ್ರಿಯ ಪಾತ್ರದ ಬಗ್ಗೆ ತನಿಖೆ ನಡೆಸಲು ಹಾಗೂ ನ್ಯಾಯಮೂರ್ತಿ ದೇವದಾಸ್ ಅವರನ್ನು ಪದಚ್ಯುತಿಗೊಳಿಸಲು ‘ವಿಚಾರಣಾ ಆಯೋಗಗಳ ಕಾಯ್ದೆ-1951ರ ಅಡಿಯಲ್ಲಿ ತನಿಖಾ ಆಯೋಗವನ್ನು ಸ್ಥಾಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ಗಮನಾರ್ಹವಾಗಿ, ಈ ಹಿಂದೆ ಅಂದರೆ, 2023ರಿಂದ ಈವರೆಗೆ ಈದಿನ.ಕಾಮ್‌ ಕೂಡ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಲೇಖನಗಳು ಮತ್ತು ವಿಡಿಯೋಗಳನ್ನು ವೆಬ್‌ಸೈಟ್‌ ಮತ್ತು ಯೂಟ್ಯೂಬ್‌ನಲ್ಲಿ ಪ್ರಕಟಿಸಿತ್ತು. ಆ ಎಲ್ಲ ವಿಡಿಯೋಗಳು ಮತ್ತು ಲೇಖನಗಳನ್ನು ನ್ಯಾಯಾಲಯದ ಆದೇಶ ಬಳಸಿಕೊಂಡು ತೆಗೆದುಹಾಕಿಸಲಾಗಿದೆ. ಆದಾಗ್ಯೂ, ನಾವು ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ವಸ್ತುನಿಷ್ಠ ಸುದ್ದಿಗಳನ್ನು ಪ್ರಕಟಿಸುತ್ತಿದ್ದೇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X